ಶಾಸಕ ಕಾಮತ್ ರಿಂದ ಮಳೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವರಲ್ಲಿ ವಿಶೇಷ ಪ್ರಾರ್ಥನೆ

ಶಾಸಕ ಕಾಮತ್ ರಿಂದ ಮಳೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವರಲ್ಲಿ ವಿಶೇಷ ಪ್ರಾರ್ಥನೆ

ಮಂಗಳೂರು: ಮಂಗಳೂರಿನ ಮಹಾನಗರದಲ್ಲಿ ಕುಡಿಯುವ ನೀರಿನ ಕೊರತೆ ಉದ್ಭವಿಸಿದ್ದು, ಶೀಘ್ರದಲ್ಲಿ ಮಳೆ ಬಂದು ನಗರದ ಜನತೆಯ ಸಂಕಷ್ಟ ಬಗೆಹರಿಯಲು ದೇವರು ಅನುಗ್ರಹಿಸಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮಧ್ಯಾಹ್ನ ದೇವಳಕ್ಕೆ ಆಗಮಿಸಿದ ಶಾಸಕರು ಭಕ್ತವೃಂದದೊಂದಿಗೆ ಮಹಾಪೂಜೆಯಲ್ಲಿ ಭಾಗವಹಿಸಿ ನಂತರ ಪ್ರಸಾದ ಸ್ವೀಕರಿಸಿದರು.

ಶಾಸಕರೊಂದಿಗೆ ಕ್ಷೇತ್ರದ ಅಧ್ಯಕ್ಷ ಎಚ್.ಎಸ್ ಸಾಯಿರಾಂ, ಪ್ರಮುಖರಾದ ರವಿಶಂಕರ್ ಮಿಜಾರ್, ಮಧುಕರ್, ದಿನಕರ್ ಶೆಟ್ಟಿ, ಮನಪಾ ಮಾಜಿ ಸದಸ್ಯರಾದ ರಾಜೇಂದ್ರ, ವಿಜಯಕುಮಾರ್ ಶೆಟ್ಟಿ, ಬಿಜೆಪಿ ಮುಖಂಡರಾದ ವಸಂತ ಜೆ ಪೂಜಾರಿ, ಪ್ರಭಾಮಾಲಿನಿ ಸಹಿತ ಅನೇಕ ಕಾರ್ಯಕರ್ತರು, ಭಕ್ತವೃಂದ ಉಪಸ್ಥಿತರಿದ್ದರು.