ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ  ಯಶ್ಪಾಲ್ ಸುವರ್ಣರ ಬದ್ಧತೆ ಶ್ಲಾಘನೀಯ : ಶ್ಯಾಮಲ ಕುಂದರ್

Spread the love

ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ  ಯಶ್ಪಾಲ್ ಸುವರ್ಣರ ಬದ್ಧತೆ ಶ್ಲಾಘನೀಯ : ಶ್ಯಾಮಲ ಕುಂದರ್

ಉಡುಪಿ: ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಆರ್ಥಿಕ ಸಹಕಾರ ನೀಡುವ ಜೊತೆ ಜೊತೆಗೆ ಇನ್ನಷ್ಟು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಪ್ರೇರಣೆ ನೀಡುವ ಯಶ್ ಪಾಲ್ ಸುವರ್ಣ ನೇತೃತ್ವದ ಪುಷ್ಪಾನಂದ ಫೌಂಡೇಶನ್ ಬದ್ಧತೆ ಶ್ಲಾಘನೀಯ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ನಿಕಟಪೂರ್ವ ಸದಸ್ಯರಾದ ಶ್ಯಾಮಲ ಕುಂದರ್ ಹೇಳಿದರು.

ಹಿರಿಯಡ್ಕ ಮಾಧವ ಮಂಗಲ ಸಭಾಭವನದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಕುಕ್ಕೆಹಳ್ಳಿ, ಪೆರ್ಡೂರು, ಬೊಮ್ಮಾರಬೆಟ್ಟು, ಭೈರಂಪಳ್ಳಿ, ಆತ್ರಾಡಿ, ಬಡಗಬೆಟ್ಟು, ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ 300 ವಿದ್ಯಾರ್ಥಿಗಳಿಗೆ ಸುಮಾರು 3 ಲಕ್ಷ ಮೌಲ್ಯದ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪುಷ್ಪಾನಂದ ಫೌಂಡೇಶನ್ ಪ್ರವರ್ತಕರಾದ ಯಶ್ ಪಾಲ್ ಸುವರ್ಣ ಮಾತನಾಡಿ ನನ್ನ ತಂದೆ ತಾಯಿ ಸ್ಮರಣಾರ್ಥ ಫೌಂಡೇಶನ್ ವತಿಯಿಂದ ಕಾಪು ಮತ್ತು ಉಡುಪಿ ತಾಲೂಕಿನ 29 ಗ್ರಾಮಗಳ 2,000 ವಿದ್ಯಾರ್ಥಿಗಳಿಗೆ ಸುಮಾರು 20 ಲಕ್ಷ ವೆಚ್ಚದಲ್ಲಿ ಪ್ರತಿಭಾ ಪುರಸ್ಕಾರ ವಿತರಿಸುತ್ತಿದ್ದು, ಶಿಕ್ಷಣಕ್ಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪುಷ್ಪಾನಂದ ಫೌಂಡೇಶನ್ ನಿರಂತರವಾಗಿ ಕಾರ್ಯೋನ್ಮುಖವಾಗಲಿದೆ ಎಂದರು.

ಸಮಾರಂಭದ ಮುಖ್ಯ ಅತಿಥಿಯಾಗಿದ್ದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ ಸಾಮಾಜಿಕ ಕಳಕಳಿಯೊಂದಿಗೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಯಶ್ ಪಾಲ್ ಸುವರ್ಣ ತಮ್ಮ ಫೌಂಡೇಶನ್ ನೀಡುತ್ತಿರುವ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ಇನ್ನೂ ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಉಪೇಂದ್ರ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್ ಪೆರ್ಣಂಕಿಲ, ಭೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವು ಪೂಜಾರಿ, ಆತ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರತ್ನ ಶೆಟ್ಟಿ, ಹಿಂದೂ ಯುವಸೇನೆ ಜಿಲ್ಲಾ ಉಪಾಧ್ಯಕ್ಷರಾದ ಶೇಖರ ಶೆಟ್ಟಿ ಹಿರಿಯಡ್ಕ, ಕೊಡಿಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪ್ರಭು, ಯುವ ಉದ್ಯಮಿ ಪ್ರವೀಣ್ ಪೂಜಾರಿ ಹಿರೇಬೆಟ್ಟು, ಶ್ರೀ ರವೀಂದ್ರ ಶ್ರೀಯಾನ್, ಪೆರ್ಡೂರು ಶ್ರೀ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮಹೇಶ್ ಶೆಟ್ಟಿ, ಕಾಪು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ ಮಾಂಬೆಟ್ಟು, ಬಡಗಬೆಟ್ಟು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಉಪಸ್ಥಿತರಿದ್ದರು. ಮಟ್ಟು ಯತೀಶ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


Spread the love