
ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ : ಶಾಸಕ ಯಶ್‌ಪಾಲ್ ಸುವರ್ಣ
ಉಡುಪಿ: ವಿಧಾನಸಭಾ ಕ್ಷೇತ್ರವ್ಯಾಪ್ತಿಯಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು. ನಗರದ ಅಜ್ಜರಕಾಡು ವಾರ್ಡ್ ಒಂದರಲ್ಲೇ 9 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಎಲ್‌ಕೆಜಿಯಿಂದ ಉನ್ನತ ಶಿಕ್ಷಣದ ವರೆಗೂ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅಧಿಕಾರಿಗಳು, ಶಿಕ್ಷಕರು ಶೈಕ್ಷಣಿಕ ಗುಣಮಟ್ಟವನ್ನು ಇನ್ನಷ್ಟು ಮೇಲ್ದರ್ಜೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲು ಶಾಸಕ ಯಶ್‌ಪಾಲ್ ಎ. ಸುವರ್ಣ ತಿಳಿಸಿದರು.
ಒಳಕಾಡು ಶಾಲೆಯಲ್ಲಿ ಬುಧವಾರ ನಡೆದ ಶಾಲಾ ಆರಂಭೋತ್ಸವದ ಹಿನ್ನೆಲೆಯಲ್ಲಿ ವಿದ್ಯಾಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಕಲಿಕಾ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಉಡುಪಿ ದೇಶ ವಿದೇಶದಲ್ಲಿ ಹೆಸರು ಮಾಡಿದೆ. ಇಲ್ಲಿನ ವಿದ್ಯಾಾರ್ಥಿಗಳು ಹೆಚ್ಚು ಪರಿಶ್ರಮ ಪಟ್ಟು ವ್ಯಾಾಸಂಗ ಮಾಡುತ್ತಾಾರೆ. ಅದಕ್ಕೆ ಪೂರಕವಾಗಿ ಶಿಕ್ಷಕರು ಬೋಧಿಸುತ್ತಾರೆ. ಆರೋಗ್ಯ ಕ್ಷೇತ್ರದಲ್ಲೂ ಜಿಲ್ಲೆ ಸಾಕಷ್ಟು ಸಾಧನೆ ಮಾಡಿದೆ. ಇನ್ನಷ್ಟು ಅಭಿವೃದ್ಧಿ ಕಾಣಬೇಕಾಗಿದೆ. ಶಿಕ್ಷಣ ಹಾಗೂ ಆರೋಗ್ಯದ ವಿಷಯದಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವ ಪ್ರಮೇಯವೇ ಇಲ್ಲ. ವಿದ್ಯಾಾರ್ಥಿಗಳಿಗೆ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ಸಿಗಬೇಕು. ಅಷ್ಟೇ ಉತ್ತಮ ಆರೋಗ್ಯ ಸೇವೆಯೂ ಜನ ಸಾಮಾನ್ಯರಿಗೆ ಲಭ್ಯವಾಗಬೇಕು. ಶಾಲೆಗಳು, ವಿದ್ಯಾಾರ್ಥಿಗಳು, ಶಿಕ್ಷಕರು ಜಿಲ್ಲೆಯ ನಿಜವಾದ ಸಂಪತ್ತು ಎಂದರು.
ಮನೋವೈದ್ಯ ಡಾ ಪಿ.ವಿ.ಭಂಡಾರಿಯವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.
ಸಿಹಿ ವಿತರಣೆ : ಶಾಸಕ ಯಶ್‌ಪಾಲ್ ಸುವರ್ಣ ಅವರು ತಮ್ಮ ತಂದೆ ತಾಯಿಯ ಸವಿ ನೆನಪಿನಲ್ಲಿ ಪುಷ್ಪಾಾನಂದ ಫೌಂಡೇಶನ್ ವತಿಯಿಂದ ಉಡುಪಿ ಕ್ಷೇತ್ರ ವ್ಯಾಪ್ತಿಯ ಎಲ್ಲ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಸುಮಾರು 17 ಸಾವಿರ ವಿದ್ಯಾಾರ್ಥಿಗಳಿಗೆ ಸಿಹಿ ತಿಂಡಿ(ಲಡ್ಡು) ವಿತರಣೆ ಮಾಡಲಾಗಿದೆ.
ಕೆನರಾ ಬ್ಯಾಂಕ್ ಡಿಜಿಎಂ ಸಬಿತಾ ನಾಯಕ್, ಡಿಡಿಪಿಐ ಕೆ. ಗಣಪತಿ, ಡಯಟ್ ಉಪ ಪ್ರಾಂಶಪಾಲರಾದ ಡಾ ಅಶೋಕ್ ಕಾಮತ್, ಬಿಇಒ ಚಂದ್ರೇಗೌಡ, ನಗರ ಸಭೆ ಸದಸ್ಯೆ ರಜನಿ ಹೆಬ್ಬಾರ್, ಎಸ್‌ಡಿಎಂಸಿ ಉಪಾಧ್ಯಕ್ಷ ಶ್ಯಾಮ್ ಕುಡ್ವಾ, ಪ್ರಾಾಥಮಿಕ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಚಂದ್ರ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಕುಸುಮಾ, ಶಿಕ್ಷಕರು, ಪಾಲಕ, ಪೋಷಕರು, ವಿದ್ಯಾರ್ಥಿಗಳು ಮೊದಲಾದವರು ಉಪಸ್ಥಿಿತರಿದ್ದರು.
ಪ್ರೌಢಶಾಲೆ ಮುಖ್ಯಶಿಕ್ಷಕಿ ನಿರ್ಮಲಾ ಸ್ವಾಗತಿಸಿ, ವಿದ್ಯಾಾರ್ಥಿನಿ ಸನ್ನಿಧಿ ನಾಯಕ್ ನಿರೂಪಿಸಿದರು.
ಅನಂತರ ಶಾಸಕ ಯಶ್‌ಪಾಲ್ ಸುವರ್ಣ ಅವರು ನಿಟ್ಟೂರು ಹನುಮಂತ ನಗರದ ಸರಕಾರಿ ಶಾಲೆ, ಬ್ರಹ್ಮಾವರದ ಬೋರ್ಡ್ ಹೈಸ್ಕೂಲ್ ಹಾಗೂ ಕೊಕ್ಕರ್ಣೆಯ ಕರ್ನಾಟಕ ಪಬ್ಲಿಕ್ ಶಾಲಾ ಆರಂಭೋತ್ಸವದಲ್ಲಿ ಪಾಲ್ಗೊಂಡರು.