ಶಿರೂರು ಮಠ ಆಸ್ತಿ ವಿಚಾರ: ಸೋದೆ ಶ್ರೀ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Spread the love

ಶಿರೂರು ಮಠ ಆಸ್ತಿ ವಿಚಾರ: ಸೋದೆ ಶ್ರೀ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಉಡುಪಿ: ಸೋದೆ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ವಿರುದ್ಧ ಶಿರೂರು ಮಠ ಆಸ್ತಿ ವಿಚಾರಕ್ಕೆ ಸಂಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂಬ ದೂರನ್ನು ಶುಕ್ರವಾರ ಹೈಕೋರ್ಟ್ ವಜಾಗೊಳಿಸಿದೆ.

ಶಿರೂರು ಮಠದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಿದ್ದು, ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ. ಹೀಗಾಗಿ ಸೋದೆ ಶ್ರೀ ಹಾಗೂ ಅವರ ಪವರ್ ಆಫ್ ಅಟಾರ್ನಿ ಹೊಂದಿರುವ ರತ್ನಕುಮಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬೃಂದಾವನಸ್ಥ ಶೀರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಹೋದರ ಲಾತವ್ಯ ಆಚಾರ್ಯ ಮಾರ್ಚ್ 24ರಂದು ಹೈಕೋಟ್ ೯ನಲ್ಲಿ ದಾವೆ ಹೂಡಿದ್ದರು.

ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ, ಪ್ರಕರಣವನ್ನು ವಜಾಗೊಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಫೆಬ್ರವರಿಯಲ್ಲಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವೂ ದಾವೆ ವಜಾಗೊಳಿಸಿತ್ತು.


Spread the love