ಶಿರೂರು ಮೀನುಗಾರರ ಸಾವು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ, ಪರಿಹಾರ ಘೋಷಣೆ

Spread the love

ಶಿರೂರು ಮೀನುಗಾರರ ಸಾವು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ, ಪರಿಹಾರ ಘೋಷಣೆ

ಬೆಳಗಾವಿ: ಶಿರೂರು ಸಮೀಪ ಅರಬ್ಬಿ ಸಮುದ್ರದಲ್ಲಿ ದೋಣಿ ಮಗುಚಿ ಇಬ್ಬರು ಮೀನುಗಾರರು ಮೃತಪಟ್ಟಿರುವುದಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ನವದೆಹಲಿ ಪ್ರವಾಸದಲ್ಲಿರುವ ಸಚಿವರು, ಘಟನೆ ಕುರಿತಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಮೃತರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುವಂತೆ ಮತ್ತು ಆದಷ್ಟು ಬೇಗ ಸೂಕ್ತ ಪರಿಹಾರ ನೀಡಲು ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


Spread the love