ಶಿರೂರು ಸ್ವಾಮೀಜಿ ನಿಧನ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ತೀವ್ರ ಸಂತಾಪ

Spread the love

ಶಿರೂರು ಸ್ವಾಮೀಜಿ ನಿಧನ: ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ತೀವ್ರ ಸಂತಾಪ

ಉಡುಪಿಯ ಅಷ್ಠಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಯತಿವರ್ಯರಾದ  ಶ್ರೀ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಯವರು ದೈವಾಧೀನರಾಗಿರುವುದಕ್ಕೆ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ಸರಳ ವ್ಯಕ್ತಿತ್ವವನ್ನು ಹೊಂದಿದ್ದ  ಲಕ್ಷ್ಮೀವರತೀರ್ಥ ಶ್ರೀಪಾದರು ಜನರ ಜೊತೆ ಸಾಮಾನ್ಯರಂತೆ ಬೆರೆಯುತ್ತಿದ್ದರು, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಶ್ರೀ ಗಳ ಆತ್ಮಕ್ಕೆ ಸದ್ಗತಿ ದೊರೆಯಲಿ ಅವರ ಅಗಲುವಿಕೆಯ ದು:ಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಅವರ ಶಿಷ್ಯವರ್ಗಕ್ಕೆ, ಭಕ್ತಾಧಿಗಳಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.


Spread the love