ಶಿರ್ವದಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ

Spread the love

ಶಿರ್ವದಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ವಿತರಣೆಗೆ ಚಾಲನೆ

ಉಡುಪಿ:  ಜಿಲ್ಲೆಯ   ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಶಿರ್ವದಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಮಂಗಳವಾರ ನಡೆಯಿತು.

ಶಿರ್ವ ಎಸ್ ಆರ್ ಎಸ್ ಕಾಲೇಜಿನಲ್ಲಿ ನಡೆದ ಲಸಿಕಾ ಅಭಿಯಾನಕ್ಕೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಚಾಲನೆ ನೀಡಿದರು.

ಶಿರ್ವ ಸಂತ ಮೇರಿ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಲಸಿಕಾ ಕಾರ್ಯಕ್ರಮ ನಡೆಯಿತು. ಈ ವೇಳೆ ಮುಂದಿನ ತಿಂಗಳಿನಿಂದ ಕಾಲೇಜುಗಳನ್ನು ಪ್ರಾರಂಭಿಸಲು ಸರ್ಕಾರವು ತೀರ್ಮಾನಿಸಲಾಗಿದೆ ಇದರ ಪೂರ್ವವಾಗಿ ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ,ಭೋದಕೇತರ ಸಿಬ್ಬಂದಿಗೆ ಕೋವಿಡ್ -19 ಲಸಿಕಾಕರಣ ನಡೆಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಕಾಲೇಜಿನ 18 ವರ್ಷ ಮೇಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಲಸಿಕೆಗಳ ಲಭ್ಯತೆಗೆ ಅನುಸಾರವಾಗಿ ಕಾಲೇಜು ಆವರಣದಲ್ಲಿಯೇ ಲಸಿಕಾಕರಣ ಅಭಿಯಾನ ಆಯೋಜಿಸಲಾಯಿತು, ಕಾಲೇಜು ಆಡಳಿತ ವ್ಯವಸ್ಥೆಯ ಸಹಕಾರದಿಂದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ ಎಂದು ಲಸಿಕಾಕರಣ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಪ್ರಸ್ತುತ ಕೋವಿಡ್ ನಂತಹ ಸಾಂಕ್ರಮಿಕ ಕಾಯಿಲೆಗಳನ್ನು ಎದುರಿಸಬೇಕಾದರೆ ಕೋವಿಡ್ -19 ಲಸಿಕೆ ಲಸಿಕಾಕರಣ ನಮ್ಮ ಶರೀರದಲ್ಲಿ ಇಮ್ಯೂನಿಟಿ ಶಕ್ತಿಗಳನ್ನು ವೃದ್ಧಿಸಿಕೊಳ್ಳಬೇಕಾಗಿರುವುದು ಇಂದಿನ ಅಗತ್ಯವಾಗಿದೆ, ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಸುಬ್ರಹ್ಮಣ್ಯ ಭಟ್ ರವರು ಜಿಲ್ಲಾಡಳಿತದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಮಾಡಲಾಗುತ್ತಿದ್ದು ಕಾಲೇಜುಗಳ ಮೂಲಕ ಲಸಿಕೆ ನೀಡಲಾಗುತ್ತಿದೆ,ಲಸಿಕೆ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂಬ ಮಾಹಿತಿಯನ್ನು ನೀಡಿದರು.

ಶಿರ್ವ ವ್ಯಾಪ್ತಿಯ ಎಸ್ ಆರ್ ಎಸ್, ಸೈಂಟ್ ಮೇರಿಸ್ ಕಾಲೇಜು ಮತ್ತು ಬಂಟಕಲ್ ಮಧ್ವ ವಾದಿರಾಜ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ಪಡೆಯಲು ಜಿಲ್ಲಾಡಳಿತ ವ್ಯವಸ್ಥೆ ಮಾಡಿದೆ.

 

Pics By Wilson D’Souza


Spread the love