ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

Spread the love

ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ಉಡುಪಿ: ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಆರ್ ಪಾಟ್ಕರ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.

ವೈಯುಕ್ತಿಕ ಕಾರಣಗಳಿಂದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು ಪಂಚಾಯತ್ ಸದಸ್ಯನಾಗಿ ಮುಂದುವರಿಯುವುದಾಗಿ ತಿಳಿಸಿರುವ ಅವರು ತನ್ನ ಅಧಿಕಾರಾವಧಿಯಲ್ಲಿ ಸಹಕರಿಸಿದ ಎಲ್ಲಾ ಗ್ರಾಮಸ್ಥರಿಗೆ, ದಾನಿಗಳಿಗೆ, ಹಿತೈಷಿಗಳಿಗೆ ಕೃತಜ್ಞತೆಯನ್ನು ತಿಳಿಸಿದ್ದಾರೆ.

ಸಹಾಯಕ ಕಮಿಷನರ್ ಉಪ ವಿಭಾಗ ಕುಂದಾಪುರ ಇವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದು, ಇದೀಗ ಅದು ಅಂಗೀಕಾರಗೊಂಡಿದೆ ಎಂದು ತಿಳಿಸಿದ್ದಾರೆ.


Spread the love