ಶಿರ್ವ ಚರ್ಚಿಗೆ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಭೇಟಿ

ಶಿರ್ವ ಚರ್ಚಿಗೆ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಭೇಟಿ

ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರು ಇತಿಹಾಸ ಪ್ರಸಿದ್ದ ಶಿರ್ವ ಆರೋಗ್ಯ ಮಾತಾ ಚರ್ಚಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಧರ್ಮಗುರುಗಳ ಆಶೀರ್ವಚನ ಪಡೆದರು.

ಚರ್ಚಿನ ಪ್ರಧಾನ ಧರ್ಮಗುರು ವಂ|ಡೆನಿಸ್ ಡೆಸಾ ಪ್ರಾರ್ಥನಾ ವಿಧಿ ನೆರವೇರಿಸಿ ಅಭ್ಯರ್ಥಿಗೆ ಶುಭ ಹಾರೈಸಿದರು.
ಈ ವೇಳೆ ಚರ್ಚಿನ ಸಹಾಯಕ ಧರ್ಮಗುರು ವಂ|ಅಶ್ವಿನ್, ಡೊನ್ ಬೊಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂ|ಮಹೇಶ್ ಡಿಸೋಜಾ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ನಾಯಕರಾದ ಹರೀಶ್ ಕಿಣಿ, ದಿವಾಕರ್ ಶೆಟ್ಟಿ, ರಾಜಶೇಖರ್ ಕೋಟ್ಯಾನ್, ವಿಶ್ವಾಸ್ ಅಮೀನ್ ಹಾಗೂ ಇತರರು ಉಪಸ್ಥಿತರಿದ್ದರು.