ಶಿರ್ವ: ಪಿಕಪ್ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

Spread the love

ಶಿರ್ವ: ಪಿಕಪ್ ವಾಹನ ಡಿಕ್ಕಿಯಾಗಿ ಪಾದಾಚಾರಿ ಸಾವು

ಉಡುಪಿ: ಶಿರ್ವ ಪೇಟೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಯೋರ್ವರಿಗೆ ಪಿಕಪ್ ವಾಹನ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಇಲ್ಲಿನ ಮುಖ್ಯ ರಸ್ತೆಯ ನ್ಯಾರ್ಮ ಸೇತುವೆ ಬಳಿ ಅ.9ರ ರವಿವಾರ ರಾತ್ರಿ ನಡೆದಿದೆ.

ಮೃತರನ್ನು ಪಾದಾಚಾರಿ ಎವುಜಿನ್ ಬ್ರಿಟ್ಟೊ(50) ಎಂದು ಗುರುತಿಸಲಾಗಿದೆ

ಕಟಪಾಡಿ ಕಡೆಯಿಂದ ಬಂದ ಪಿಕಪ್ ವಾಹನ ಢಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡ ಅವರನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love