ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

Spread the love

ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ
 

ಉಡುಪಿ: ಶಿರ್ವ ಫೈಝುಲ್ ಇಸ್ಲಾಂ ಮದ್ರಸದ ನಾಲ್ವರು ಮಕ್ಕಳು ಮೇ 14ರಂದು ಮಧ್ಯಾಹ್ನ ವೇಳೆ ನಾಪತ್ತೆಯಾಗಿರುವ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ವಿದ್ಯಾರ್ಥಿಗಳನ್ನು ಬಿಹಾರ ಮೂಲದ ತಬಾರಕ್, ಜಂಶೀದ್, ತಂಝೀರ್ ಆಲಮ್, ಶಾಹಿಲ್ ಎಂದು ಗುರುತಿಸಲಾಗಿದೆ. ಇವರಲ್ಲಿ ಇಬ್ಬರು ಅಪ್ರಾಪ್ತರಾಗಿದ್ದಾರೆ.

ಮದ್ರಸ ಶಿಕ್ಷಣ ಕಲಿಯುತ್ತಿದ್ದ ಇವರು, ಮಂಗಳವಾರ ಮಧ್ಯಾಹ್ನ ವೇಳೆ ಮದ್ರಸದಿಂದ ಹೊರಗಡೆ ಹೋದವರು ಈವರೆಗೆ ವಾಪಸ್ ಬಾರದೆ ನಾಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ. ಇಲ್ಲಿಂದ ಅವರು ತಮ್ಮ ಊರಿಗೆ ಹೋಗಿರಬಹುದು ಎಂದು ಶಂಕಿಸಲಾಗಿದೆ.

ಈ ಬಗ್ಗೆ ಫೈಝುಲ್ ಇಸ್ಲಾಂ ಎಜುಕೇಶನ್ ಟ್ರಸ್ಟ್ನ ಫರ್ವೇಝ್ ಸಲೀಂ ನೀಡಿದ ದೂರನಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.


Spread the love

Leave a Reply