ಶೀಘ್ರ ಶರತ್ ಹತ್ಯೆ ಆರೋಪಿಗಳ ಬಂಧನ ; ರಾಜ್ಯ ಪೊಲೀಸ್ ಮಹಾನಿರ್ದೇಶಕ ರೂಪಕುಮಾರ್ ದತ್ತ

Spread the love

ಶೀಘ್ರ ಶರತ್ ಹತ್ಯೆ ಆರೋಪಿಗಳ ಬಂಧನ ; ರಾಜ್ಯ ಪೊಲೀಸ್ ಮಹಾನಿರ್ದೇಶಕ ರೂಪಕುಮಾರ್ ದತ್ತ

ಮಂಗಳೂರು: ಶರತ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಸುಳಿವು ಲಭ್ಯವಾಗಿದ್ದು, ಶೀಘ್ರ ನಿಜವಾದ ಆರೋಪಿಗಳನ್ನು ಬಂಧಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ರೂಪಕುಮಾರ್ ದತ್ತ ತಿಳಿಸಿದರು.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ವಿಚಾರಣೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ. ಸಾಕಷ್ಟು ಮಾಹಿತಿ ಲಭ್ಯವಾಗಿದೆ. ಈವರೆಗೂ ಯಾರನ್ನು ಬಂಧಿಸಿಲ್ಲ. ಸಂಶಯ ಇದ್ದವರನ್ನು ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಕಾರ್ತಿಕ್ ರಾಜ್ ಕೊಲೆ ಪ್ರಕರಣದಲ್ಲಿ 5 ತಿಂಗಳು ತನಿಖೆ ನಡೆಸಿ, ನಿಜವಾದ ಆರೋಪಿಗಳನ್ನು ಬಂಧಿಸಲಾಗಿದೆ. ಅದೇ ರೀತಿ ಶರತ್ ಪ್ರಕರಣದಲ್ಲಿಯೂ ನಿಜವಾದ ಆರೋಪಿಗಳನ್ನು ಬಂಧಿಸಲಾಗುವುದು. ನಿರಪರಾಧಿಗಳಿಗೆ ಪೊಲೀಸರು ಯಾವುದೇ ತೊಂದರೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯಲ್ಲಿ ಶಾಂತಿ ಕಾಪಾಡುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಜಲೀಲ್ ಕರೋಪಾಡಿ, ಹತ್ಯೆ, ಅಶ್ರಫ್ ಕಲಾಯಿ ಹತ್ಯೆ, ರತ್ಕಾಕರ ಶೆಟ್ಟಯ ಕೊಲೆ ಯತ್ನ ಹೀಗೆ ಪ್ರಮುಖ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಕ್ಷಿಪ್ರಗತಿಯಲ್ಲಿ ಆರೋಪಿಗಳನ್ನು ಪತ್ತೆಹಚ್ಚಿದ್ದಾರೆ. ರಾತ್ರಿ ಹಗಲೆನ್ನದೆ ಬಂದೋಬಸ್ತು ಮಾಡಿ ಪರಿಸ್ಥಿತಿ ಶಾಂತ ಗೊಳಿಸಿದ್ದಾರೆ ಎಂದರು.

ದಕ ಜಿಲ್ಲೆಯಲ್ಲಿ ಮತೀಯ ಗಲಭೆ ವಿಪರೀತವಾಗಿದ್ದು, ಜಿಲ್ಲೆಯಲ್ಲಿ ಶಾಂತಿ ಕದಡುವವರು, ಅದಕ್ಕೆ ಪ್ರಚೋದನೆ ನೀಡುವವರು, ಮತ್ತು ಅದರಲ್ಲಿ ಶಾಮೀಲಾದವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುತುವುದು. ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಆದ್ಯತೆ ನೀಡಲು ಪರಿಶ್ರಮ ಪಡಲಾಗುತ್ತದೆ. ಈಗಾಗಲೇ ವಿವಿಧ ಸಂಘಟನೆಗಳ ಜೊತೆ ಮಾತುಕತೆ ನಡೆಸಿದ್ದು, ಈ ಸಂಗಟನೆಗಳ ಮುಖಂಡರು ಪೋಲಿಸ್ ಇಲಾಖೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ.


Spread the love