ಶೂಟಿಂಗ್ ವೇಳೆ ಹೃದಯಾಘಾತ: ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಪದ್ಮಾ ಕುಮುಟ ವಿಧಿವಶ

Spread the love

ಶೂಟಿಂಗ್ ವೇಳೆ ಹೃದಯಾಘಾತ: ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಪದ್ಮಾ ಕುಮುಟ ವಿಧಿವಶ

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ ಕಿರುತೆರೆಯ ಹಿರಿಯ ನಟಿ ಪದ್ಮಾ ಕುಮುಟಾ (58) ಹೃದಯಾಘಾತದಿಂದ ನಿಧನರಾಗಿದ್ದಾರೆ. ಶೂಟಿಂಗ್ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳದಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಕೆಲ ವರ್ಷಗಳಿಂದ ಕಿರುತೆರೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ನಟಿ ಪದ್ಮಾ ಕುಮುಟಾ ಅವರು ಬಯಲುದಾರಿ, ಅರಿವು, ಫಲಿತಾಂಶ, ಅವಸ್ಥೆ, ಮೌನಗೀತೆ ಸೇರಿದಂತೆ ಹಲವು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದರು. ಚೋಮನದುಡಿ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದರು.

ಪದ್ಮಾ ಕುಮುಟಾ ಸೋಮವಾರದಂದು ಶೃತಿ ನಾಯ್ಡು ಅವರ ಮಹಾನದಿ ಸಿರೀಯಲ್ ಶೂಟಿಂಗ್ ಸಮಯದಲ್ಲಿ ಇದ್ದಕ್ಕಿದ್ದ ಹಾಗೆ ಉಸಿರಾಟದ ತೊಂದರೆಯಿಂದಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಕೊನೆಯುಸಿರೆಳೆದಿದ್ದರು.

ಕೃಪೆ: ಕನ್ನಡ ಪ್ರಭ


Spread the love