ಶೋಭಕ್ಕನನ್ನು ಹುಡುಕಿಕೊಡಿ, 5000 ರೂ. ಬಹುಮಾನ ಗೆಲ್ಲಿ – ಮಿಥುನ್ ರೈ

Spread the love

ಶೋಭಕ್ಕನನ್ನು ಹುಡುಕಿಕೊಡಿ, 5000 ರೂ. ಬಹುಮಾನ ಗೆಲ್ಲಿ – ಮಿಥುನ್ ರೈ

ಉಡುಪಿ: ನವರಾತ್ರಿ ಹಬ್ಬ ಮುಗಿಯುವುದರ ಒಳಗಾಗಿ ಉಡುಪಿ, ಕಾಪು, ಕುಂದಾಪುರ ವ್ಯಾಪ್ತಿಯಲ್ಲಿ ಉಡುಪಿ ಸಂಸದೆ ಶೋಭಾ ಕರಂದ್ಲಾಝೆ ಕಾಣಿಸಿಕೊಂಡರೆ ಸೆಲ್ಫಿ ತೆಗೆದು ಕಳುಹಿಸಿಕೊಡಿ. ಈ ರೀತಿ ಕಳುಹಿಸಿಕೊಟ್ಟ ಮೊದಲ ವಿಜೇತ 5 ಮಂದಿಗೆ ತಲಾ 5 ಸಾವಿರ ಬಹುಮಾನವಾಗಿ ನೀಡಲಾಗುವುದು. ಆ ಬಳಿಕವೂ ಕರಂದ್ಲಾಜೆ ಕ್ಷೇತ್ರದಲ್ಲಿ ಕಾಣಿಸಿಕೊಳ್ಳದಿದ್ದರೆ ಎಲ್ಲಾ ಪೊಲೀಸ್ ಠಾಣೆಯಲ್ಲೂ ನಾಪತ್ತೆ ದೂರು ದಾಖಲಿಸಲಾಗುವುದು. ಸಂಸದರನ್ನು ಹುಡುಕಿ ಕೊಡಿ ಎಂಬ ಪೋಸ್ಟರ್ ಅಂಟಿಸಲಾಗುವುದು ಎಂದು ಯುವ ಮುಖಂಡ ಉಡುಪಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಮಿಥುನ್ ರೈ ಹೇಳಿದರು.

ಅವರು ಕೇಂದ್ರ, ರಾಜ್ಯ ಸರಕಾರ ಹಾಗೂ ಉಡುಪಿ ನಗರಸಭೆಯ ವಿರುದ್ಧ ಹಾಗೂ ರಾಷ್ಟ್ರೀಯ ಹೆದ್ದಾರಿ ಮತ್ತು ಉಡುಪಿ ಪ್ರಮುಖ ರಸ್ತೆಗಳನ್ನು ದುರಸ್ತಿಗೆ ಆಗ್ರಹಿಸಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಮಂಗಳವಾರ ಕಲ್ಮಾಡಿ ಜಂಕ್ಷನ್‌ನಿಂದ ಕರಾವಳಿ ಬೈಪಾಸ್‌ವರೆಗೆ ವಿನೂತನ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದರು.

ಉಡುಪಿಗೆ ಶೋಭಾ ಕರಂದ್ಲಾಜೆ, ದಕ್ಷಿಣ ಕನ್ನಡಕ್ಕೆ ನಳಿನ್ ಕುಮಾರ್ ಇರುವವರೆಗೆ ಕ್ಷೇತ್ರ ಉದ್ಧಾರ ಆಗಲ್ಲ. ರಾಜ್ಯ ಬಿಜೆಪಿ ಸರಕಾರ ನಿದ್ರೆಯ ಮಂಪರಿ ನಲ್ಲಿದೆ. ಗುತ್ತಿಗೆದಾರರು ರಘುಪತಿ ಭಟ್ ಹಾಗೂ ಶೋಭಾ ಕರಂದ್ಲಾಜೆಗೆ ಶೇ.40 ಕಮಿಷನ್ ಕೊಟ್ಟಿಲ್ಲ ಎಂದೆ ರಸ್ತೆ ದುರಸ್ತಿಗೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿದ ಅವರು, ಗಾಂಧೀಜಿಯ ಮೂರು ಮಂಗನಂತೆ ರಘುಪತಿ ಭಟ್, ಶೋಭಾ ಕರಂದ್ಲಾಜೆ, ಸುನೀಲ್ ಕುಮಾರ್ ಬೊಮ್ಮಾಯಿಯ ಮಂಗಗಳು ಅವರು ಬೇಡವಾದುದ್ದನ್ನು ನೋಡುವುದು, ಕೇಳುವುದು ಮಾತನಾಡುವುದು ಇವರ ಕೆಲಸ ಎಂದು ವ್ಯಂಗ್ಯವಾಡಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ದಿನೇಶ್ ಪುತ್ರನ್, ಬಿ.ನರಸಿಂಹ ಮೂರ್ತಿ, ಯತೀಶ್ ಕರ್ಕೇರ, ಉದ್ಯಾವರ ನಾಗೇಶ್ ಕುಮಾರ್, ಆನಂದಿ, ಅಣ್ಣಯ್ಯ ಶೇರಿಗಾರ್, ಪ್ರಶಾಂತ್ ಜತ್ತನ್ನ, ಪ್ರಶಾಂತ್ ಪೂಜಾರಿ, ಡಿಯೋನ್ ಡಿಸೋಜಾ, ಹಮ್ಮದ್ ಉಡುಪಿ, ಮೀನಾಕ್ಷಿ ಮಾಧವ ಬನ್ನಂಜೆ, ಫಾ.ವಿಲಿಯಂ ಮಾರ್ಟಿಸ್, ಗಣೇಶ್ ನೆರ್ಗಿ, ವೆರೋನಿಕಾ ಕರ್ನೇಲಿಯೋ, ಡಾ.ಸುನೀತಾ ಶೆಟ್ಟಿ, ರೋಶನಿ ಒಲಿವೆರಾ, ದಿನೇಶ್ ಪುತ್ರನ್, ಬಿ.ಕುಶಲ ಶೆಟ್ಟಿ, ಅಮೃತ್ ಶೆಣೈ, ಮೇರಿ ಡಿ’ಸೋಜಾ, ನಾರಾಯಣ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

https://www.facebook.com/MangaloreanNews/videos/779761789943716


Spread the love