ಶೌಚಾಲಯದಲ್ಲಿ ಹಿಡನ್ ಕ್ಯಾಮಾರ ಇರಿಸಲಾಗಿದೆ ಎಂಬ ಗಾಳಿ ಸುದ್ದಿ ನಂಬಬೇಡಿ – ಖುಷ್ಬೂ ಸುಂದರ್

Spread the love

ಶೌಚಾಲಯದಲ್ಲಿ ಹಿಡನ್ ಕ್ಯಾಮಾರ ಇರಿಸಲಾಗಿದೆ ಎಂಬ ಗಾಳಿ ಸುದ್ದಿ ನಂಬಬೇಡಿ – ಖುಷ್ಬೂ ಸುಂದರ್

ಉಡುಪಿ: ಶೌಚಾಲಯದಲ್ಲಿ ಹಿಡನ್ ಕ್ಯಾಮಾರ ಇರಿಸಲಾಗಿದೆ ಎಂಬ ಗಾಳಿ ಸುದ್ದಿ ನಂಬಬೇಡಿ. ತನಿಖೆ ಆರಂಭಿಸಲಾಗಿದೆ ಸಂಬಂಧಪಟ್ಟ ಫೋನ್ ಗಳು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ ಪೊಲೀಸರ ಹೇಳಿಕೆ ಹೊರತಾಗಿ ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ತನಿಖೆ ನಡೆಸಿ ಹೊರಬಂದ ಬಳಿಕ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಭೂ ಸುಂದರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈಗಷ್ಟೇ ನಾನು ತನಿಖೆಯನ್ನು ಆರಂಭ ಮಾಡಿದ್ದೇನೆ ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ ಮತ್ತು ಈಗಲೇ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಈ ವಿಚಾರದಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬರಬೇಡಿ ಎಂದರು.

ಕಾಲೇಜಿನಲ್ಲಿ ಸಾಕ್ಷ್ಯ ಸಿಕ್ಕಿದೆಯಾ ಎನ್ನೋ ಬಗ್ಗೆ ಹೇಳಲು ಸಾಧ್ಯವಿಲ್ಲ, ಪೊಲೀಸರ ಹೇಳಿಕೆ ಹೊರತಾಗಿ ಸದ್ಯ ಜನರು ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ. ಮಾಹಿತಿ ಸಂಗ್ರಹಕ್ಕೆ ನಮಗೆ ಇನ್ನು ಸ್ವಲ್ಪ ಸಮಯ ಬೇಕು. ಎಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ವರ್ತಿಸಬೇಕೆಂದು ಪ್ರಾಮಾಣಿಕವಾಗಿ ಕೋರುತ್ತೇನೆ ಎಂದರು.

ಯಾವುದೇ ರೂಮರ್ಗಳಿಗೆ ವಾಟ್ಸಪ್ ಮೆಸೇಜ್ ಗಳಿಗೆ ಗಮನ ಕೊಡಬೇಡಿ ನಾವೇ ಸರಿಯಾದ ಮಾಹಿತಿಯನ್ನು ನೀಡುತ್ತೇವೆ. ಸಂಬಂಧಪಟ್ಟ ಫೋನ್ ಗಳು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ. ಇದಕ್ಕೆ ಹೊರತಾಗಿ ಯಾವುದೇ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ.

ನಮಗೆ ನಮ್ಮ ಕೆಲಸ ಮಾಡಲು ಬಿಡಿ. ನಾವು ಯಾರನ್ನು ಮಾತನಾಡಿಸುತ್ತೇವೆ ಎಲ್ಲಿಗೆ ಹೋಗುತ್ತೇವೆ ಎಂದು ಹಿಂಬಾಲಿಸಬೇಡಿ ಎನ್ ಸಿಡಬ್ಲ್ಯೂ ಪರವಾಗಿ ನಾನು ಸ್ಥಳದಲ್ಲಿ ಇದ್ದೇನೆ ನಮಗೆ ನಮ್ಮ ಕೆಲಸ ಮಾಡಲು ಬಿಡಿ ಸದ್ಯ ನಿಮಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಎನ್ ಸಿ ಡಬ್ಲ್ಯೂ ಗೆ ದೂರು ಬಂದ ಕಾರಣ ನಾನು ಇಲ್ಲಿ ಇದ್ದೇನೆ ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ ನಾನು ನಿಮಗೆ ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಇಲ್ಲ ಎಂದರು

ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರವಾಗಿದ್ದು ಕಾಯಬೇಕು ಇದು ಎರಡು ನಿಮಿಷದ ನೂಡಲ್ಸ್ ಥರ ಅಲ್ಲ ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ ಇದೊಂದು ಶೈಕ್ಷಣಿಕ ಕೇಂದ್ರ ಎಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ ಪೊಲೀಸರ ಜೊತೆಗೆ ನಾವು ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ ಪೊಲೀಸರ ಸಹಕಾರದೊಂದಿಗೆ ನಮ್ಮ ತನಿಖೆ ಮುಂದುವರಿಯಲಿದೆ ಎಂದರು.


Spread the love