ಶ್ರೀಕೃಷ್ಣ ಮಠಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ

Spread the love

ಶ್ರೀಕೃಷ್ಣ ಮಠಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ

ಉಡುಪಿ: ಶ್ರೀಕೃಷ್ಣಮಠಕ್ಕೆ,ಗೋವಾದ ಮುಖ್ಯಮಂತ್ರಿಗಳಾದ ಪ್ರಮೋದ್ ಸಾವಂತ್ ರವರು ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು.

ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ರವರು ಸ್ವಾಗತಿಸಿದರು.ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಕೆ.ರಘುಪತಿ ಭಟ್,ಬಿ.ಜೆ.ಪಿ ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ,ವೈದ್ಯರಾದ ಡಾ.ಕೃಷ್ಣಪ್ರಸಾದ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.


Spread the love