ಶ್ರೀಪತಿ ಹೆಗಡೆ ಹಕ್ಲಾಡಿಗೆ ಅಪ್ಪಣ್ಣ ಹೆಗ್ಡೆ ಜೀವಮಾನ ಸಾಧನಾ ಪ್ರಶಸ್ತಿ

Spread the love

ಶ್ರೀಪತಿ ಹೆಗಡೆ ಹಕ್ಲಾಡಿಗೆ ಅಪ್ಪಣ್ಣ ಹೆಗ್ಡೆ ಜೀವಮಾನ ಸಾಧನಾ ಪ್ರಶಸ್ತಿ

ಕುಂದಾಪುರ: ಆಧ್ಯಾತ್ಮ ರಹಸ್ಯ ಮಾಸಪತ್ರಿಕೆ, ಬೀಜಾಡಿ ಗೋಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ಯಕ್ಷಕಲಾ ಸಂಘ, ಕೋಟೇಶ್ವರ ಓಂಶಾಂತಿ ಪ್ರೊಡೆಕ್ಷನ್, ಕುಂದಾಪುರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಪತ್ರಿಕಾ ಕೃಷಿಯಲ್ಲಿ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ  ಅಪ್ಪಣ್ಣ ಹೆಗ್ಡೆ ಜೀವಮಾನ ಶ್ರೇಷ್ಠ ಸಾಧನಾ ಪ್ರಶಸ್ತಿ ಹಾಗೂ 10 ಸಾವಿರ ನಗದು ಪುರಸ್ಕಾರಕ್ಕೆ ವಿಜಯವಾಣಿ ಹಿರಿಯ ವರದಿಗಾರ ಆರ್. ಶ್ರೀಪತಿ ಹೆಗಡೆ ಹಕ್ಲಾಡಿ ಆಯ್ಕೆ ಆಗಿದ್ದಾರೆ.

ಜ.27, ಸಂಜೆ 5ಕ್ಕೆ ನಡೆಯುವ ನಮ್ಮೂರ ಹಬ್ಬ ಗೋಪಾಡಿ ಗೆಂಡೋತ್ಸವ ವೇದಿಕೆಯಲ್ಲಿ ಕೇಮಾರು ಸಾಂದೀಪನಿ ಸಾಧನಾ ಆಶ್ರಮ ಶ್ರೀ ಈಶವಿಠಲದಾಸ ಸ್ವಾಮೀಜಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಬಸ್ರೂರು ಮಹತೋಬಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಅಪ್ಪಣ್ಣ ಹೆಗ್ಡೆ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಕನ್ನಡ ಚಲನಚಿತ್ರ ನಟ ರಮೇಶ್, ವಿದ್ಯುತ್ ಗುತ್ತಿಗೆದಾರ ಕೆ.ಆರ್.ನಾಯಕ್, ಬೀಜಾಡಿ ಗೋಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ಶ್ರೀ ಚಿಕ್ಕುಅಮ್ಮ ಸಪರಿವಾರ ದೇವಸ್ಥಾನ ಆಡಳಿತ ಮೊಕ್ತೇಸರ ಆನಂದ ಬಿಳಿಯ, ಮುಂಬೈ ನಾಗರಾಜ ಆರ್.ಸುವರ್ಣ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಪರಿಸರದ 4 ಶಾಲಾ ಮಕ್ಕಳಿಗೆ ಬಹುಮಾನ ವಿತರಣೆ, ಮಂಜುನಾಥ ಕುಂದಾಪುರ ಹಾಸ್ಯ ಸಿಂಚನ, ಭಜನೆ, ಸುಗಮ ಸಂಗೀತ, ನೃತ್ಯ, ಸಾಂಸ್ಕøತಿ ಸಂಜೆ, ಯಕ್ಷಗಾನ ನಡೆಯಲಿದೆ ಎಂದು ತಾಲೂಕು ಪತ್ರಕರ್ತ ಸಂಘ ಅಧ್ಯಕ್ಷ ಸತೀಶ್ ಕುಮಾರ್ ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here