ಶ್ರೀರಾಮದೇವರ ಪ್ರಾಣಪ್ರತಿಷ್ಠಾ: ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ 

Spread the love

ಶ್ರೀರಾಮದೇವರ ಪ್ರಾಣಪ್ರತಿಷ್ಠಾ: ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಿ 

ಮಂಗಳೂರು: ಅಯೋಧ್ಯೆ ಶ್ರೀರಾಮದೇವರ ಪ್ರಾಣಪ್ರತಿಷ್ಠಾ ಪ್ರಯುಕ್ತ ಜಿಲ್ಲೆಯಾದ್ಯಂತ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರಿಗೆ ಸ್ವಯಂಪ್ರೇರಿತವಾಗಿ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ಖಾಸಗಿ ಸಂಘ-ಸಂಸ್ಥೆಗಳು, ಮಾಲೀಕರಿಗೆ – ವಿಶ್ವ ಹಿಂದೂ ಪರಿಷದ್ ಮನವಿ ಮಾಡಿದೆ

500 ವರ್ಷಗಳ ಹೋರಾಟದ ನಂತರ ಅಯೋಧ್ಯೆಯಲ್ಲಿ ಶ್ರೀರಾಮದೇವರ ಭವ್ಯಮಂದಿರ ನಿರ್ಮಾಣವಾಗುತ್ತಿದ್ದು, ಜನವರಿ 22ರಂದು ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಭಾರತೀಯರೆಲ್ಲರೂ ಆ ದಿನವನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕರಾವಳಿಯ ವಿವಿಧ ಮಂದಿರಗಳಲ್ಲಿ ಹೋಮ, ಯಜ್ಞ, ಪೂಜೆ, ಜಪ, ಭಜನೆ, ಪ್ರವಚನ, ಆರತಿ ಸೇರಿದಂತೆ ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆ ಕೂಡ ಸಿದ್ಧತೆಗೊಳ್ಳುತ್ತಿದೆ. ರಾಜ್ಯದ ಮುಜರಾಯಿ ಇಲಾಖೆಯು ಎಲ್ಲಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸುವಂತೆ ಆದೇಶ ನೀಡಿದೆ. ಈ ಶುಭದಿನವು ಕೆಲಸದ ದಿನವಾಗಿರುವುದರಿಂದ ಜನರಿಗೆ ಭಾಗವಹಿಸಲು ಅನುಕೂಲವಾಗುವಂತೆ ಉದ್ಯಮಪತಿಗಳು, ಸಂಘ-ಸಂಸ್ಥೆಗಳು, ವ್ಯಾಪಾರ ಮಳಿಗೆಗಳು. ವ್ಯಾಪಾರಿಗಳು, ಹೋಟೆಲ್ ಉದ್ಯಮಿಗಳು, ಶಾಲಾ ಕಾಲೇಜು ಆಡಳಿತ ಮಂಡಳಿಗಳು, ಸರ್ಕಾರಿ ಕಚೇರಿಗಳ ಮುಖ್ಯಸ್ಥರ ಬಳಿ ವಿಶ್ವ ಹಿಂದೂ ಪರಿಷತ್ ವಿನಯ ಪೂರ್ವಕವಾಗಿ ವಿನಂತಿಸುತ್ತದೆ. ಮಂದಿರಗಳಲ್ಲಿ ನಡೆಯುವ ಕಾರ್ಯಕ್ರಮವು ಬೆಳ್ಳಿಗೆ 10 ರಿಂದ ಮಧ್ಯಾಹ್ನ 2 ಗಂಟೆಯ ತನಕ ನಡೆಯಲಿದೆ, ಈ ಸಮಯದಲ್ಲಿ ತಾವುಗಳು ತಮ್ಮಲ್ಲಿ ಕೆಲಸ ಮಾಡುವವರಿಗೆ, ವಿದ್ಯಾರ್ಥಿಗಳಿಗೆ, ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ವಿನಂತಿಸಿದೆ

ಕರಾವಳಿಯ 7 ಲಕ್ಷ ಮನೆಗಳಿಗೆ ಪವಿತ್ರಮಂತ್ರಾಕ್ಷತೆ ವಿತರಣೆ – ಸಾವಿರಕ್ಕೂ ಹೆಚ್ಚು ಧಾರ್ಮಿಕ ಕೇಂದ್ರಗಳಲ್ಲಿ ನೇರಪ್ರಸಾರದ ವ್ಯವಸ್ಥೆಗೆ ಸಿದ್ಧತೆ. 1200 ಕೇಂದ್ರಗಳಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ನೇರಪ್ರಸಾರದ ವ್ಯವಸ್ಥೆಯ ಸಿದ್ಧತೆ

ಜನವರಿ 1 ರಿಂದ 15 ತನಕ ನಡೆದ ಪವಿತ್ರಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮ ಯಶಸ್ವಿಯಾಗಿ ನಡೆದು ದಕ್ಷಿಣಕನ್ನಡ, ಉಡುಪಿ, ಕೊಡಗು ಸೇರಿದಂತೆ ಕರಾವಳಿಯಲ್ಲಿ 7 ಲಕ್ಷ ಮನೆಗಳಿಗೆ ಪವಿತ್ರ ಮಂತ್ರಾಕ್ಷತೆ ವಿತರಿಸಲಾಗಿದೆ – 1200 ಕೇಂದ್ರಗಳಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ನೇರಪ್ರಸಾರದ ವ್ಯವಸ್ಥೆಯ ಸಿದ್ಧತೆ

ಜನವರಿ 22 ರಂದು ಅಯೋಧ್ಯೆಯ ಪುನರ್ಪ್ರತಿಷ್ಠೆಯ ಸುಸಂಧರ್ಭ ಕರಾವಳಿಯ 1000 ಕ್ಕೂ ಹೆಚ್ಚು ಧಾರ್ಮಿಕ ಕೇಂದ್ರಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಶ್ರೀ ಮಂಗಳಾದೇವಿ ದೇವಸ್ಥಾನ, ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಉಜಿರೆ ಶ್ರೀ ಜನಾರ್ಧನ ದೇವಸ್ಥಾನ, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನ, ಉಡುಪಿ ಶ್ರೀ ಕೃಷ್ಣ ಮಠ, ಕುಂದಾಪುರ ಕುಂದೇಶ್ವರ ದೇವಸ್ಥಾನ, ಮಡಿಕೇರಿ ಶ್ರೀ ಓಂಕಾರೇಶ್ವರ ದೇವಸ್ಥಾನ ಮತ್ತು ಭಾಗಮಂಡಲ ದೇವಸ್ಥಾನ ಸೇರಿದಂತೆ 1200 ಕ್ಕೂ ಅಧಿಕ ಧಾರ್ಮಿಕ ಕೇಂದ್ರಗಳಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ಸಿದ್ಧತೆ ಮಾಡಲಾಗಿದೆ.

ಪ್ರಾಣ ಪ್ರತಿಷ್ಠಾಪನೆಯ ದಿನದ ಸಂಜೆ ಸೂರ್ಯಾಸ್ತವಾದ ಮೇಲೆ ಪ್ರತಿಯೊಬ್ಬ ರಾಮಭಕ್ತರು ತಮ್ಮ ತಮ್ಮ ಮನೆಯ ಮುಂದೆ ಎಲ್ಲ ದೇವಾದಿ ದೇವತೆಗಳನ್ನು ಪ್ರಸನ್ನಗೊಳಿಸಲು ಕನಿಷ್ಠ 5 ದೀಪಗಳನ್ನು ಬೆಳಗುವುದರೊಂದಿಗೆ ಮತ್ತೊಂದು ದೀಪಾವಳಿಯನ್ನು ಆಚರಿಸಲಾಗುತ್ತದೆ. ಇದೇ ಸಂಧರ್ಭದಲ್ಲಿ ಪ್ರತೀ ಮನೆಯಲ್ಲಿ ಮನೆಯವರೆಲ್ಲ ಸೇರಿ ಅಯೋಧ್ಯೆ ಶ್ರೀರಾಮ ಮಂದಿರವಿರುವ ಉತ್ತರ ದಿಕ್ಕಿಗೆ ಮುಖ ಮಾಡಿ ಮಹಾ ಮಂಗಳಾರತಿಯನ್ನು ಮಾಡುವುದರ ಮೂಲಕ ಶ್ರೀರಾಮಚಂದ್ರ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಮಾಡಿದ್ದಾರೆ


Spread the love