ಶ್ರೀ ಕೃಷ್ಣ ಜನ್ಮಾಷ್ಟಮಿ ಸಾಂಸ್ಕ್ರತಿಕ ಕಾರ್ಯಕ್ರಮಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಚಾಲನೆ

ಶ್ರೀ ಕೃಷ್ಣ ಜನ್ಮಾಷ್ಟಮಿ ಸಾಂಸ್ಕ್ರತಿಕ ಕಾರ್ಯಕ್ರಮಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಚಾಲನೆ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಶ್ರೀಜಗದ್ಗುರು ಮೂಲಮಹಾಸಂಸ್ಥಾನಂ ಶ್ರೀ ಹೃಷಿಕೇಶ ತೀರ್ಥ ಪೀಠಮ್ ಪರ್ಯಾಯ ಶ್ರೀಪಲಿಮಾರು ಮಠ ಶ್ರೀಕೃಷ್ಣ ಮಠದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಸಾಂಸ್ಕ್ರತಿಕ ಕಾರ್ಯಕ್ರಮಗಳ ಉದ್ಘಾಟನೆ ಭಾನುವಾರ ಜರುಗಿತು.

ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಸಾಂಸ್ಕ್ರತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಇತಿಹಾಸ ತಜ್ಞರಾದ ಪ್ರೊ.ಪಾದೂರು ಶ್ರೀಪತಿ ತಂತ್ರಿ, ಕಲಾವಿದರಾದ ಶಮಾ ಕೃಷ್ಣ, ದುರ್ಗಾoಬಾ ಮೋಟಾರ್ಸ್ ನ ಕೃಷ್ಣಾನಂದ ಚಾತ್ರ, ನಿಟ್ಟೆ ವಿದ್ಯಾಲಯದ ಡಾ.ಅನಂತ ಪದ್ಮನಾಭ ಆಚಾರ್ಯ ಮತ್ತು ಜಿ.ಎಂ. ವಿದ್ಯಾನಿಕೇತನ ಹಾರಾಡಿಯ ಪ್ರಕಾಶ್ಚಂದ್ರ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

ಪರ್ಯಾಯ ಪಲಿಮಾರು ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು,ಹಾಗೂ ಪಲಿಮಾರು ಕಿರಿಯ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಸಮಾರಂಭದಲ್ಲಿ ಅಭ್ಯಾಗತರಾಗಿ ಕರ್ನಾಟಕದ ಮಾಜಿ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ವಿದಾನಸಭಾದ ಸದಸ್ಯ ಭೋಜೇಗೌಡ, ಉಡುಪಿ ಶಾಸಕರಾದ ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಎನ್.ಎಂ.ಪಿ.ಟಿ. ಅಧ್ಯಕ್ಷ ವೆಂಕಟರಮಣ ಅಕ್ಕರಾಜು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಯಕ್ರಮವು ಮಠದ ವಿದ್ಯಾರ್ಥಿಗಳಿಂದ ವೇದಘೋಷ ಹಾಗೂ ಕೊಡವೂರು ನೃತ್ಯನಿಕೇತನದವರಿಂದ ‘ಶ್ರೀಕೃಷ್ಣ ಲೀಲಾ’ ನೃತ್ಯರೂಪಕದೊಂದಿಗೆ ಆರಂಭವಾಯಿತು.