
Spread the love
ಶ್ರೀ ಕೃಷ್ಣ ಮಠಕ್ಕೆ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಭೇಟಿ
ಉಡುಪಿ: ಉಡುಪಿಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲು ಉಡುಪಿಗೆ ಆಗಮಿಸಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಆದಿಉಡುಪಿ ಹೆಲಿಪ್ಯಾಡ್ ನಿಂದ ಶ್ರೀಕೃಷ್ಣ ಮಠಕ್ಕೆ ಆಗಮಿಸಿದ ಅವರು ಬಳಿಕ ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದರು.
ಈ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸುನೀಲ್ ಕುಮಾರ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಶಾಸಕರಾದ ಸಿ ಟಿ ರವಿ, ರಘುಪತಿ ಭಟ್ ಹಾಗೂ ಇತರರು ಉಪಸ್ಥಿತರಿದ್ದರು
Spread the love