ಶ್ರೀ ರಾಮ ದೇವರ ಪ್ರಾಣಪ್ರತಿಷ್ಠೆ: ಉಡುಪಿ – ಹೆಬ್ರಿ ಮಾರ್ಗದಲ್ಲಿ ಮೂರು ಬಸ್ಸುಗಳಿಂದ ಉಚಿತ ಸೇವೆ

Spread the love

ಶ್ರೀ ರಾಮ ದೇವರ ಪ್ರಾಣಪ್ರತಿಷ್ಠೆ: ಉಡುಪಿ – ಹೆಬ್ರಿ ಮಾರ್ಗದಲ್ಲಿ ಮೂರು ಬಸ್ಸುಗಳಿಂದ ಉಚಿತ ಸೇವೆ

ಉಡುಪಿ: ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನಾ ಕಾರ್ಯಕ್ರಮದ ಪ್ರಯುಕ್ತ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ದೇಶದ ನಾಗರಿಕರೆಲ್ಲರೂ ಸಂಭ್ರಮಿಸುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಸಹ ವಿವಿಧ ಸಂಘಟನೆಗಳು ವಿವಿಧ ರೀತಿಯಲ್ಲಿ ಸಂಭ್ರಮವನ್ನು ಹಂಚಿಕೊಳ್ಳುತ್ತಿದ್ದು ಉಡುಪಿಯಿಂದ ಹೆಬ್ರಿಗೆ ತೆರಳುವ ಎಸ್ ಆರ್ ಎಮ್, ಎಸ್ ಡಿ ಎಮ್, ಮುಟ್ಲುಪಾಡಿಯಿಂದ ಉಡುಪಿಗೆ ತೆರಳುವ ಎಸ್ ಎಮ್ ಎಮ್ ಎಸ್ ಬಸ್ಸಿನವರು ದಿನವಿಡೀ ಉಚಿತ ಪ್ರಯಾಣವನ್ನು ನಾಗರಿಕರಿಗೆ ಒದಗಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ


Spread the love