ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸಂಸ್ಮರಣೆ ; ಅವರೇ ನೆಟ್ಟ ಸಸಿಗಳಿಗೆ ಆವರಣ ಗೋಡೆ ನಿರ್ಮಿಸಿ ಲೋಕಾರ್ಪಣೆ

Spread the love

ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸಂಸ್ಮರಣೆ ; ಅವರೇ ನೆಟ್ಟ ಸಸಿಗಳಿಗೆ ಆವರಣ ಗೋಡೆ ನಿರ್ಮಿಸಿ ಲೋಕಾರ್ಪಣೆ

ಉಡುಪಿ: ಗುರುವಾರ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಪ್ರಥಮ ಪುಣ್ಯತಿಥಿ .ಬೆಂಗಳೂರಿನ ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ಶ್ರೀಗಳ ಶಿಲಾ ವೃಂದಾವನ ಪ್ರತಿಷ್ಠಾ ಪೂರ್ವಕ ಆರಾಧನೋತ್ಸವ ನಡೆದರೆ ಉಡುಪಿಯೂ ದೇಶದ ವಿವಿಧೆಡೆ ಇರುವ ಪೇಜಾವರ ಮಠದ ಶಾಖೆಗಳಲ್ಲೂ ಶ್ರೀಗಳ ಸಂಸ್ಮರಣೋತ್ಸವವು ನಡೆಯಿತು .

ಉಡುಪಿಯಲ್ಲಿ ಶ್ರೀಗಳ ಸಂಸ್ಮರಣೆಯ ವಿಶೇಷ ಕಾರ್ಯಕ್ರಮವೊಂದು ನಡೆದಿದೆ ಸ್ತಳೀಯ ಮುಚ್ಲುಕೋಡು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ , ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನ ಕೊಡವೂರು ಶಂಕರನಾರಾಯಣ ದೇವಸ್ಥಾನ , ಪಾಜಕದ ಆನಂದತೀರ್ಥ ವಿದ್ಯಾಲಯಗಳಲ್ಲಿ ಶ್ರೀ ವಿಶ್ವೇಶತೀರ್ಥರು ವಿವಿಧ ಸಂದರ್ಭಗಳಲ್ಲಿ ಭೇಟಿ ನೀಡಿದಾಗ ಸಸಿಗಳನ್ಬು ನೆಟ್ಟಿದ್ದು ಈಗ ಅದು ಸೊಂಪಾಗಿ ಬೆಳೆದು ನಿಂತಿವೆ . ಇವುಗಳಿಗೆ ಸುಂದರವಾಗಿ ಕಟ್ಟೆಗಳನ್ನು ಕಟ್ಟಿ ಪುಷ್ಪಾಲಂಕಾರ ಮಾಡಿ ಲೋಕಾರ್ಪಣೆಗೊಳಿಸಿ ಸಂಸ್ಮರಣೆಯನ್ನು ಮಾಡಲಾಯಿತು .

ಮುಚ್ಲುಕೋಡು ದೇವಳದ ಆವರಣದಲ್ಲಿ ಶ್ರೀಗಳು ತಮ್ಮ 80 ನೇ ಜನ್ಮ ವರ್ಧಂತಿ ಕಾರ್ಯಕ್ರಮ ದ ಸಂದರ್ಭ 10/12/2010 ರಂದು ಸುಬ್ರಹ್ಮಣ್ಯ ಷಷ್ಟೀ ಪರ್ವದಿನದಂದು ಶ್ರೀ ವಿಶ್ವೇಶತೀರ್ಥ ಮೂಲಿಕಾ ವನ ನಿರ್ಮಾಣಕ್ಕೆ ನಾಗಕೇಸರ ಸಸಿ ನೆಟ್ಟು ಚಾಲನೆ ನೀಡಿದ್ದರು . ಅದು ಈಗ ಸಮೃದ್ಧವಾಗಿ ಬೆಳೆದಿದೆ ಮಾತ್ರವಲ್ಲ ; ಅಲ್ಲಿ 80 ವಿವಿಧ ವನಸ್ಪತಿಗಳ ಸುಂದರವಾದ ಪುಟ್ಟ ವನ ಬೆಳೆದು ನಿಂತಿದೆ . ಪರಿಸರ ಪ್ರಕೃತಿಯ ಬಗ್ಗೆ ಅನನ್ಯ ಪ್ರೀತಿ ಹೊಂದಿದ್ದ ಶ್ರೀಗಳ ಸ್ಮರಣಾರ್ಥ ಈ ಸಸಿಗಳನ್ನು ಚೆನ್ನಾಗಿ ಪೋಷಿಸುವ ಸಂಕಲ್ಪ ಮಾಡಲಾಗಿದೆ . ಈ ಕಟ್ಟೆಗಳ ಮೇಲೆ ಶ್ರೀಗಳ ಹೆಸರು ಮತ್ತು ನೆಟ್ಟ ದಿನಾಂಕವನ್ನು ಶಿಲಾಫಲಕದಲ್ಲಿ ನಮೂದಿಸಲಾಗುತ್ತದೆ ಎಂದು ಸಂಯೋಜಿಸಿದ ವಾಸುದೇವ ಭಟ್ ಪೆರಂಪಳ್ಳಿ ತಿಳಿಸಿದ್ದಾರೆ .

ಈ ಬಗ್ಗೆ ಕರಂಬಳ್ಳಿಯಲ್ಲಿ ಕೆ ರಘುಪತಿ ಭಟ್ ರಮೇಶ ಬಾರಿತ್ತಾಯ ವಾಗೀಶ , ಆನಂದತೀರ್ಥ ವಿದ್ಯಾಲಯದ ರೂಪಾ ಬಲ್ಲಾಳ್ , ಗೀತಾ ಶಶಿಧರ್ , ಮುಚ್ಲುಕೋಡಿನಲ್ಲಿ ರಾಮಕೃಷ್ಣ ತಂತ್ರಿ ರಾಜಶೇಖರ ಹೆಬ್ಬಾರ್ , ಕೊಡವೂರು ದೇವಳದ ಆಡಳಿತ ಮಂಡಳಿ ಜನಾರ್ದನ ಕೊಡವೂರು ವಿಶೇಷ ಸಹಕಾರ ನೀಡಿದ್ದಾರೆ .


Spread the love