ಸಂಘಟನೆಗೆ ಪೂರಕವಾಗಿ ಕೆಲಸ ಮಾಡೋಣ : ಮಟ್ಟಾರ್ ರತ್ನಾಕರ ಹೆಗ್ಡೆ

ಸಂಘಟನೆಗೆ ಪೂರಕವಾಗಿ ಕೆಲಸ ಮಾಡೋಣ : ಮಟ್ಟಾರ್ ರತ್ನಾಕರ ಹೆಗ್ಡೆ

ಉಡುಪಿ: ಪಕ್ಷದ ಸ್ಥಾನ ಮಾನ ನಮಗೆ ಬಂದಂತಹ ಜವಾಬ್ದಾರಿಯಾಗಿದ್ದು ಅರ್ಪಣಾ ಮನೋಭಾವದಿಂದ ಕೆಲಸ ಮಾಡುವಂತೆ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ ಹೇಳಿದ್ದಾರೆ.

ಅವರು ಬುಧವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

bjp-udupi-meeting

ಮುಂದೆ ಚುನಾವಣಾ ವರ್ಷವಾಗಿದೆ ಹಿಂದೆ ಜನಸಂಘದ ಕಾಲದಿಂದಲೂ ಪಕ್ಷ ಸಂಘಟನಾತ್ಮಕವಾಗಿ ಶಿಸ್ತಿಗೆ ಹೆಸರಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಸಮಗ್ರ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡಿ ಭ್ರಷ್ಟಾಚಾರ ರಹಿತ ಸರಕಾರವನ್ನು ಕೇಂದ್ರಕ್ಕೆ ನೀಡಿದ್ದಾರೆ. ಕೇಂದ್ರ ಸರಕಾರ ಸರ್ವಸ್ಪರ್ಶಿ-ಸರ್ವವ್ಯಾಪಿಯಾಗಿ ಜಾರಿಗೆ ತಂದ ಅನೇಕ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸಬೇಕಾಗಿದೆ ಅದಕ್ಕಾಗಿ ಬೂತ್ ಮಟ್ಟದವರೆಗಿನ ಎಲ್ಲಾ ಬಿಜೆಪಿ ಕಾರ್ಯಕರ್ತರನ್ನು ತೊಡಗಿಸಿಕೊಳ್ಳಬೇಕೆಂದು ಅವರು ತಿಳಿಸಿದರು. ವರ್ಷಗಳ ಕಾಲ ಕೆಲಸ ಮಾಡಿದ ಅನುಭವಿಗಳೇ ಜಿಲ್ಲಾ ತಂಡದಲ್ಲಿರುವುದರಿಂದ ತಮ್ಮ ರಾಜಕೀಯ ಆಸಕ್ತಿಯನ್ನು ಪಕ್ಷದ ಸಂಘಟನೆಗೆ ಉಪಯೋಗಿಸುವಂತೆ ಅವರು ಕರೆನೀಡಿದರು.

ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಸಭೆಯಲ್ಲಿ ಮಾತನಾಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಸ್ವಾಗತಿಸಿ, ಕುಯಿಲಾಡಿ ಸುರೇಶ ನಾಯಕ್ ಕಾರ್ಯಕ್ರಮ ನಿರ್ವಹಿಸಿ ಯಶ್‍ಪಾಲ್ ಸುವರ್ಣ ವಂದಿಸಿದರು.