ಸಂಘಟನೆಯ ಕಾರ್ಯಕರ್ತನಿಗೆ ಇರಿತ – ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಕಾಮತ್

Spread the love

ಸಂಘಟನೆಯ ಕಾರ್ಯಕರ್ತನಿಗೆ ಇರಿತ – ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಕಾಮತ್

ಮಂಗಳೂರು: ಲಾಲ್ ಭಾಗ್ ಬಳಿ ಸಂಘಟನೆಯ ಕಾರ್ಯಕರ್ತ ದೀಪಕ್ ಮೇಲೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಗಾಯಗೊಳಿಸಿದ ವಿಚಾರ ತಿಳಿದು ತಕ್ಷಣವೇ ಶಾಸಕ ವೇದವ್ಯಾಸ್ ಕಾಮತ್ ಅವರು ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯದ ಕುರಿತು ಮಾಹಿತಿ ಪಡೆದರು.

ತಕ್ಷಣವೇ ದಾಳಿಕೋರರನ್ನು ಬಂಧಿಸಿ ಕಠಿಣ ಕ್ರಮ ಜರಗಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮಂಗಳೂರಿನಲ್ಲಿ ಶಾಂತಿ ಕದಡಲು ಯತ್ನಿಸುವ ಇಂತಹ ಘಟನೆಯ ಹಿಂದೆ ಯಾರೇ ಇದ್ದರೂ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.


Spread the love