ಸಂತೆಕಟ್ಟೆ ರಾಷ್ಟೀಯ ಹೆದ್ದಾರಿ ಕಾಮಗಾರಿ ಸುಗಮ ಸಂಚಾರ, ಸುರಕ್ಷತಾ ಕ್ರಮಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

Spread the love

ಸಂತೆಕಟ್ಟೆ ರಾಷ್ಟೀಯ ಹೆದ್ದಾರಿ ಕಾಮಗಾರಿ ಸುಗಮ ಸಂಚಾರ, ಸುರಕ್ಷತಾ ಕ್ರಮಕ್ಕೆ ಶಾಸಕ ಯಶ್ಪಾಲ್ ಸುವರ್ಣ ಸೂಚನೆ

ಸಂತೆಕಟ್ಟೆ ರಾಷ್ಟೀಯ ಹೆದ್ದಾರಿ ಅಂಡರ್ ಪಾಸ್ ಕಾಮಗಾರಿ ತೀವ್ರ ಮಳೆಯ ಹಿನ್ನೆಲೆಯಲ್ಲಿ ಸುಗಮ ಸಂಚಾರ ಹಾಗೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂತೆಕಟ್ಟೆ ಜಂಕ್ಷನ್ ಸದಾ ವಾಹನ ದಟ್ಟಣೆ ಹೊಂದಿರುವ ಕಾರಣ ಕಾಮಗಾರಿ ಹಿನ್ನೆಲೆಯಲ್ಲಿ ಸುರಕ್ಷತೆಗೆ ಆದ್ಯತೆ ನೀಡುವಂತೆ ಹಾಗೂ ಕಾಮಗಾರಿಯ ಪ್ರದೇಶದಲ್ಲಿ ಮಣ್ಣು ಕುಸಿತವಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು.

ಸಂತೆಕಟ್ಟೆ ನೇಜಾರ್ ತಿರುವು ಬಳಿ ರಸ್ತೆಯಲ್ಲಿ ನೀರು ನಿಂತು ಜನಸಾಮಾನ್ಯರಿಗೆ ಸಮಸ್ಯೆ ಬಗ್ಗೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸುಗಮ ಸಂಚಾರಕ್ಕೆ ವ್ಯವಸ್ಥೆಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತರಾದ ರಾಯಪ್ಪ, ಎ ಇ ಇ ಯಶವಂತ ಪ್ರಭು,ನಗರ ಸಭಾ ಸದಸ್ಯರಾದ ಮಂಜುಳಾ ನಾಯಕ್, ಜಯಂತಿ ಪೂಜಾರಿ, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಪ್ರಮುಖರಾದ ಉಮೇಶ್ ಶೆಟ್ಟಿ, ಸತೀಶ್ ನಾಯ್ಕ್, ದಿನೇಶ್ ಪ್ರಭು, ಅಮಿತ್ ಪೂಜಾರಿ, ಪ್ರಸಾದ್ ರಾವ್, ಚಿನ್ಮಯ ಮೂರ್ತಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.


Spread the love