
Spread the love
ಸಂತೋಷ್ ಪಾಟೀಲ್ ಆತ್ಮಹತ್ಯೆ: ಉಡುಪಿ ಪೊಲೀಸರಿಂದ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ
ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಉಡುಪಿ ಪೊಲೀಸರು ಪೂರ್ಣಗೊಳಿಸಿದ್ದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಕೊಲೆ ಅಥವಾ ಕೊಲೆ ಪ್ರಚೋದನೆ ಎಂಬುದಕ್ಕೆ ಸೂಕ್ತ ಸಾಕ್ಷಿಗಳು ಇಲ್ಲ ಎಲ್ಲಾ ತಾಂತ್ರಿಕ ಸಾಕ್ಷಿಗಳನ್ನು ಸಂಗ್ರಹಿಸಿ ಕೋರ್ಟ್ ಗೆ ಸಲ್ಲಿಕೆ ಮಾಡಲಾಗಿದೆ.
ವರದಿಯಲ್ಲಿ ಸಿಸಿಟಿವಿ ವೀಡಿಯೋ, ಆಡಿಯೋ, ಮೊಬೈಲ್ ಸಂದೇಶ, ಬ್ಯಾಂಕ್ ದಾಖಲೆ, ಗುತ್ತಿಗೆ ವಿವರ, ಕುಟುಂಬಸ್ಥರು, ಸ್ನೇಹಿತರ ಹೇಳಿಕೆಗಳನ್ನು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈಶ್ವರಪ್ಪ , ಈಶ್ವರಪ್ಪ ಕಡೆಯವರಿಂದ ಬೆದರಿಕೆ ಬಂದಿದೆ ಎಂಬುದಕ್ಕೆ ಯಾವುದೇ ದಾಖಲೆಗಳ ಕೊರತೆ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
Spread the love