ಸಂಸದ ರಾಘವೇಂದ್ರರಿಂದ ಕೊಲ್ಲೂರು ಮೂಕಾಂಬಿಕೆ ದರ್ಶನ

Spread the love

ಸಂಸದ ರಾಘವೇಂದ್ರರಿಂದ ಕೊಲ್ಲೂರು ಮೂಕಾಂಬಿಕೆ ದರ್ಶನ

ಕುಂದಾಪುರ: ಲೋಕ ಕಲ್ಯಾಣಾರ್ಥವಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿಎಮ್ ಸುಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ಕೊಲ್ಲೂರಿನ ಜಗನ್ಮಾತೆ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನೆಡೆಯುತ್ತಿರುವ ಶತ ಚಂಡಿಯಾಗದ ಮೂರನೇ ದಿನದ ಪಾರಾಯಣದ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ಅವರು ಕುಟುಂಬ ಸಮೇತವಾಗಿ ಭಾಗವಹಿಸಿ ಮೂಕಾಂಬಿಕೆಯ ದರ್ಶನ ಪಡೆದರು.

ಈ ವೇಳೆಯಲ್ಲಿ ಶಾಸಕ ಬಿಎಮ್ ಸುಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್,ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಕೆರಾಡಿ, ಜಿ.ಪಂ ಮಾಜಿ ಸದಸ್ಯರಾದ ಬಾಬು ಹೆಗ್ಡೆ ತೆಗ್ಗರ್ಸೆ, ಸುರೇಶ್ ಬಟವಾಡಿ, ಶಂಕರ್ ಪೂಜಾರಿ, ತಾ.ಪಂ ಮಾಜಿ ಸದಸ್ಯರಾದ ಪುಷ್ಪರಾಜ್ ಶೆಟ್ಟಿ, ಉಮೇಶ್ ಕಲ್ಗದ್ದೆ, ಮುಖಂಡರಾದ ಸದಾಶಿವ ಪಡುವರಿ, ಸಾಮ್ರಾಟ್ ಶೆಟ್ಟಿ, ಬೈಂದೂರು ರೈಲು ಪ್ರಯಾಣಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷರಾದ ವೆಂಕಟೇಶ್ ಕಿಣಿ ಮೊದಲಾದವರು ಇದ್ದರು.


Spread the love