ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೋವಿಡ್-19 ವರದಿ ನೆಗೆಟಿವ್

Spread the love

ಸಚಿವ ಕೋಟ ಶ್ರೀನಿವಾಸ ಪೂಜಾರಿ ಕೋವಿಡ್-19 ವರದಿ ನೆಗೆಟಿವ್

ಕುಂದಾಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ದೃಢವಾದ ಬೆನ್ನಲ್ಲೆ ಅವರ ಜೊತೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸ್ವಯಂ ಕ್ವಾರಂಟೈನ್ ಆಗಿದ್ದ ದಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕೋವಿಡ್-19 ಪರೀಕ್ಷಾ ವರದಿ ನೆಗೆಟಿವ್ ಬಂದಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ‘ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಸಂಪರ್ಕದಲ್ಲಿ ಇದ್ದೆ ಎನ್ನುವ ಕಾರಣಕ್ಕೆ ಇಂದಿನ ತನಕ ಹೋಂ ಕ್ವಾರೆಂಟೈನ್’ನಲ್ಲಿದ್ದು ಕೋವಿಡ್-19 ಪರೀಕ್ಷೆ ಮಾಡಿಸಿದ್ದು ಅದರ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಇಂದಿನಿಂದ (ಬುಧವಾರದಿಂದ) ಮತ್ತೆ ಕರ್ತವ್ಯಕ್ಕೆ ಹಾಜರಾಗುತ್ತಿದ್ಧೇನೆ’ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕಳೆದೆರಡು ದಿನದಿಂದ ತನ್ನ ಕೋಟದ ಮನೆಯಲ್ಲೇ ಸೆಲ್ಫ್ ಕ್ವಾರೆಂಟೈನ್ ಆಗಿದ್ದರು.


Spread the love