“ಸತ್ಯ ಆದಷ್ಟು ಬೇಗ ಹೊರಬರಲಿದೆ” : ಲೈಂಗಿಕ ಹಗರಣ ಸಂಬಂಧ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

Spread the love

“ಸತ್ಯ ಆದಷ್ಟು ಬೇಗ ಹೊರಬರಲಿದೆ” : ಲೈಂಗಿಕ ಹಗರಣ ಸಂಬಂಧ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ
 

ಬೆಂಗಳೂರು : ಲೈಂಗಿಕ ಹಗರಣ ಪ್ರಕರಣದ ಆರೋಪಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅ‍ಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ ಸಂಬಂಧ ಎಸ್‌ಐಟಿ ತನಿಖೆಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಫೇಸ್‌ಬುಕ್‌ ನಲ್ಲಿ ಬರೆದುಕೊಂಡಿರುವ ಅವರು, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ C.I.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” ಪೋಸ್ಟ್‌ ಮಾಡಿದ್ದಾರೆ.

7 ದಿನಗಳ ಕಾಲಾವಕಾಶ ನೀಡುವಂತೆ ಎಸ್‌ಐಟಿಗೆ ಪತ್ರ

ಎಸ್‌ಐಟಿ ಮುಂದೆ ಹಾಜರಾಗಲು 7 ದಿನಗಳ ಕಾಲಾವಕಾಶ ಕೋರಿ ಪ್ರಜ್ವಲ್ ರೇವಣ್ಣ ಪರ ವಕೀಲರಿಂದ‌ ಎಸ್‌ಐಟಿಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ, ಬೆಂಗಳೂರಿನಿಂದ‌ ಹೊರಗಡೆ ಇರುವುದರಿಂದ ಎಸ್‌ಐಟಿ ಮುಂದೆ ಹಾಜರಾಗಲು ಸಾಧ್ಯವಾಗುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಸದ ಪ್ರಜ್ವಲ್‌ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿದ್ದು, ಎಸ್‌ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ.


Spread the love

Leave a Reply