
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಿಂದ ಪ್ರಗತಿ ಪರಿಶೀಲನೆ
ಮಂಗಳೂರು: ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರು ಫೆ.3ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯಾಪ್ತಿಯಡಿ ಗಂಗಾ ಕಲ್ಯಾಣ ಯೋಜನೆ ಹಾಗೂ ದ್ವಿಚಕ್ರ ವಾಹನ ಒದಗಿಸುವ ಯೋಜನೆಯಡಿ ಫಲಾನುಭವಿಗಳ ಆಯ್ಕೆ ಪಟ್ಟಿಯನ್ನು ಕೂಡಲೇ ಒದಗಿಸಿ ಕೊಡುವಂತೆ ಸೂಚಿಸಿದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ವಿವಿಧ ಯೋಜನೆಗಳಡಿ ಬಿಡುಗಡೆಯಾದ ಅನುದಾನವನ್ನು ಕಾಲಮಿತಿಯೊಳಗೆ ಬಳಸಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ನಿರ್ದೇಶನ ನೀಡಿದರು.
ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿದ್ದಲಿಂಗೇಶ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮನೀಷ್ ಸೇರಿದಂತೆ ಹಲವು ಅಧಿಕಾರಿಗಳು, ವಿವಿಧ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಸಭೆಯಲ್ಲಿದ್ದರು.