ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

Spread the love

ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ ಆತ್ಮಹತ್ಯೆ

ಉಡುಪಿ: ಹೆಸರಾಂತ ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಪ್ರಾಥಮಿಕ ಮೂಲಗಳ ಪ್ರಕಾರ ಕೌಟಂಬಿಕ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಮ್ಯ ಸ್ವಭಾವದವರಾಗಿದ್ದ ಲೀಲಾಧರ ಶೆಟ್ಟಿಯವರು ಕಾಪುವಿನಲ್ಲಿ ರಂಗ ತರಂಗ ಎಂಬ ನಾಟಕ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಸದಾ ಸಮಾಜಪರ ಕಾಳಜಿ ಹೊಂದಿದ್ದ ಅವರು ಯಾವುದೇ ಕ್ಷಣದಲ್ಲಿ ಕೂಡ ಅಶಕ್ತರ ನೆರವಿಗೆ ಧಾವಿಸುತ್ತಿದ್ದರು. ಆದರೂ ಇತ್ತೀಚೆಗೆ ಹಣಕಾಸಿನ ತೊಂದರೆ ಕೂಡ ಹೊಂದಿದ್ದರು ಎನ್ನಲಾಗಿದೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love