ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಉತ್ಸುಕತೆ ತೋರುವಂತೆ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕರೆ 

Spread the love

ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಉತ್ಸುಕತೆ ತೋರುವಂತೆ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಕರೆ 

ಮಂಗಳೂರು: ಜನಸಾಮಾನ್ಯರ ಶ್ರೇಯೋಭಿವೃದ್ದಿಗೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾರ್ಯಕ್ರಮಗಳನ್ನು ಮುಂದಿನ ಒಂದೂವರೆ ವರ್ಷ ಜನರಿಗೆ ತಲುಪಿಸುವ ಕೆಲಸವನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಟ್ಟಾಗಿ ನಿರ್ವಹಿಸುವ ಉತ್ಸುಕತೆ ತೋರಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರು ಕರೆ ನೀಡಿದರು.

ಅವರು ಜ. 28 ರ ಶುಕ್ರವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರ ಅಸ್ತಿತ್ವಕ್ಕೆ ಬಂದು ಇಂದಿಗೆ ಆರು ತಿಂಗಳು ಪೂರ್ಣಗೊಂಡಿವೆ, ಇನ್ನೂ ಬಾಕಿ ಉಳಿದಿರುವ ಒಂದೂವರೆ ವರ್ಷಗಳ ಅವಧಿಯಲ್ಲಿ ರಾಜ್ಯ ಸÀರ್ಕಾರವು ಜನರ ಕಲ್ಯಾಣಕ್ಕಾಗಿ ರೂಪಿಸಿರುವ ಹಲವು ಜನಪರ ಹಾಗೂ ಜನಪ್ರಿಯ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಲು ಸಿದ್ದರಾಗುವಂತೆ ಅವರು ತಾಕೀತು ಮಾಡಿದರು.

ವಿಧಾನಸಭೆಯ ಸದಸ್ಯರಾಗಿ ಮೂರನೇ ಬಾರಿ ಆಯ್ಕೆಯಾಗಿರುವ ತಮಗೆ ತಾಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ಉದ್ಭವವಾಗುವ ಸಮಸ್ಯೆಗಳ ಬಗ್ಗೆ ಆಳವಾದ ಅರಿವಿದೆ, ಈ ಜಿಲ್ಲೆಯಲ್ಲಿರುವ ಆ ಸಮಸ್ಯೆಗಳು ಮುಂದಿನ ಒಂದೂವರೆ ವರ್ಷದಲ್ಲಿ ಬಗೆಹರಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ತಂಡದಂತೆ ಸರ್ಕಾರಕ್ಕೆ ಗೌರವ ತರುವ ರೀತಿಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಒಳ್ಳೆಯ ಹಾಗೂ ಉತ್ತಮ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಬೇಕು ಎಂದರು.

ಒಂದು ಕೆಲಸವನ್ನು ಒಂದು ಬಾರಿ ಮಾತ್ರ ಹೇಳುವ ತಮ್ಮದು ಅದೇ ಕೆಲಸವನ್ನು ಎರಡನೇ ಬಾರಿ ಹೇಳುವ ಸ್ವಭಾವ ತಮಗಿಲ್ಲ. ಆದ್ದರಿಂದ ಕಾಲಮಿತಿಯೊಳಗೆ ಕೆಲಸ ಮಾಡುವ ಮನೋಭಾವವನ ರೂಢಿಸಿಕೊಳ್ಳಬೇಕು ಎಂದ ಸಚಿವರು, ಆಡಳಿತದಲ್ಲಿ ಚುರುಕುತನ ಇರಬೇಕು, ನೋಡೋಣ.. ಮಾಡೋಣ.. ಡೋಂಟ್ ಕೇರ್ ಪಾಲಿಸಿಗಳು ಇದ್ದಲ್ಲಿ ಹಾಗೂ ಕಡತಗಳನ್ನು ತಳ್ಳಿ ಹಾಕುವ ಕೆಲಸವನ್ನು ಎಂದಿಗೂ ಸಹಿಸುವುದಿಲ್ಲ, ಇಲಾಖೆಗಳು ಹಾಗೂ ಅಧಿಕಾರಿಗಳ ನಡುವೆ ಪರಸ್ಪರ ಸಮನ್ವಯತೆ ಹಾಗೂ ಹೊಂದಾಣಿಕೆ ಇರಬೇಕು, ಕಾಲಮಿತಿ ಹಾಗೂ ಸ್ಪಷ್ಟತೆಯಿಂದ ಆಯಾ ಕೆಲಸಗಳನ್ನು ಪೂರ್ಣಗೊಳಿಸಲು ಗಮನ ನೀಡಬೇಕು, ಆ ಮೂಲಕ ಆಡಳಿತ ಚುರುಕಾದ ಬಗ್ಗೆ ಜನ ಸಾಮಾನ್ಯರ ಅರಿವಿಗೆ ಬರಬೇಕು, ಫೆಬ್ರುವರಿಯಲ್ಲಿ ತಾಲೂಕು ಮಟ್ಟದಲ್ಲಿಯೂ ಕೆಡಿಪಿ ಸಭೆಗಳನ್ನು ನಡೆಸಲಾಗುವುದು, ಸಾರ್ವಜನಿಕರು ಸರ್ಕಾರಿ ಕೆಲಸಗಳಿಗೆ ಪುನಃ ಯಾವುದೇ ದೂರನ್ನು ನೀಡಲು ಆಸ್ಪದ ಕೊಡಬಾರದು ಎಂದು ತಿಳಿಸಿದರು.

ಒಂದು ವೇಳೆ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯಮಟ್ಟದಲ್ಲಿ ಬಗೆಹರಿಸುವ ಕೆಲವೊಂದು ಸಮಸ್ಯೆಗಳಿದ್ದರೆ ಆ ಕುರಿತು ಅಧಿಕಾರಿಗಳು ತಮ್ಮ ಗಮನಕ್ಕೆ ತರಬಹುದು, ಸರ್ಕಾರದಿಂದ ಹೊರಡಿಸಲಾದ ಸುತ್ತೋಲೆಗಳಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಅವುಗಳ ಬದಲಾವಣೆಗಳಿದ್ದಲ್ಲೀ ಅವುಗಳನ್ನು ಸಹ ಅವಗಹನೆಗೆ ತರಬಹುದಾಗಿದೆ ಎಂದು ಹೇಳಿದರು.

ಕೃಷಿ, ಉದ್ಯಮ, ಪ್ರವಾಸೋದ್ಯಮ ಹಾಗೂ ಸಂಸ್ಕøತಿ ಸ್ನೇಹಿ ಜಿಲ್ಲೆಯನ್ನಾಗಿ ಜಿಲ್ಲೆಯನ್ನು ಅಭಿವೃದ್ದಿ ಪಡಿಸಲು ಈ ನಾಲ್ಕು ಸೂತ್ರಗಳನ್ನಿಟ್ಟುಕೊಂಡು ಆಯಾ ಕ್ಷೇತ್ರಗಳಲ್ಲಿ ವಿಶಿಷ್ಟ ರೀತಿಯಲ್ಲಿ ಅಭಿವೃದ್ದಿ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು, ಇದು ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲೂ ಪ್ರಕಟವಾಗಬೇಕು, ಜಿಲ್ಲೆಯಲ್ಲಿ ಮುಂದಿನ ಕೆಲವು ದಿನಗಳಲ್ಲೇ ಕಡತ ವಿಲೇವಾರಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ವಿಲೇವಾರಿಯಲ್ಲಿ ಎಲ್ಲಾ ಕಡತಗಳ ವಿಲೇವಾರಿಗೆ ಗಮನಹರಿಸಲಾಗುವುದು ಅದಕ್ಕಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದ ಸಚಿವರು, ಭ್ರμÁ್ಟಚಾರ, ಅಶಿಸ್ತು, ಉದಾಸೀನತೆ, ಉಡಾಫೆ ತನವನ್ನು ಸಹಿಸುವುದಿಲ್ಲ ಎಲ್ಲರೂ ಒಂದೇ ಮನೋಭಾವದಿಂದ ಕೆಲಸ ಮಾಡಿ ಸರಕಾರಕ್ಕೆ ಉತ್ತಮ ಹೆಸರು ತಂದುಕೊಡಬೇಕೆಂದು ಕರೆ ನೀಡಿದರು.

ರಾಜ್ಯ ಸರ್ಕಾರವು ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಬಗೆಹರಿಸಲು ಯತ್ನಿಸುತ್ತಿದೆ, ಅದು ಬಹುತೇಕ ಫೆಬ್ರುವರಿ ಅಂತ್ಯದೊಳಗೆ ಬಗೆಹರಿಯುವ ಸಾಧ್ಯತೆಗಳಿವೆ, ಜಿಲ್ಲೆಯಲ್ಲಿ ಕುಮ್ಕಿ, ಬಾಣೆ, ಡಿಸಿ ಮನ್ನಾ ಜಾಗದ ಸಮಸ್ಯೆಗಳನ್ನು ಬಗೆಹರಿಸಲಾಗುವುದು, ಜಿಲ್ಲೆಯಲ್ಲಿರುವ 94-ಸಿ, 94-ಸಿ.ಸಿ. ಸಮಸ್ಯೆಗಳಿಗೆ ಪರಿಹಾರ ಸಿಗಲಿವೆ ಎಂದರು.
ಶಾಸಕರಾದ ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್ ಮಾತನಾಡಿದರು.

ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ನಗರ ಪೆÇಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಋಷಿಕೇಶ ಭಗವಾನ್ ಸೋನಾವಣೆ, ಪೊಲೀಸ್ ಡೆಪ್ಯೂಟಿ ಕಮೀಷನರ್ ಹರಿರಾಮ್ ಶಂಕರ್ ಹಾಗೂ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್ ಕುಮಾರ್ ಮಿಶ್ರಾ ವೇದಿಕೆಯಲ್ಲಿದ್ದರು.

ಜಿಲ್ಲೆಯ ಸಹಾಯಕ ಆಯುಕ್ತರು, ತಹಶೀಲ್ದಾರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಆರೋಗ್ಯ, ಕೃಷಿ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


Spread the love