
Spread the love
ಸರ್ಕಾರಿ ನೌಕರರ ಮುಷ್ಕರ; ಶೇ.17ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರದ ಆದೇಶ
ಬೆಂಗಳೂರು: ಸರ್ಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಡೆಸಿದ್ದು, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ಆದೇಶ ಹೊರಡಿಸಲಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದ್ದು, ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.
ಈ ಬಗ್ಗೆ ಆದೇಶ ಹೊರಡಿಸಲಾಗಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರುಗಳಿಗೆ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.
ಸರ್ಕಾರದ ಈ ನಿರ್ಧಾರದಿಂದ ಸರ್ಕಾರಿ ನೌಕರರ ಮುಷ್ಕರ ಹಿಂಪಡೆಯುವ ಸಾಧ್ಯತೆಯಿದೆ.
Spread the love