ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ – ವೆರೋನಿಕಾ ಕರ್ನೆಲಿಯೋ

Spread the love

ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ – ವೆರೋನಿಕಾ ಕರ್ನೆಲಿಯೋ

ಉಡುಪಿ: ರಾಜ್ಯದ ಬಡ, ಮಧ್ಯಮ ವರ್ಗದ ಜನರ ಹಾಗೂ ಮಹಿಳೆಯರು, ಯುವಕರು, ಕೃಷಿಕರು, ಸೇರಿದಂತೆ ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದಾರೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ.

ಮುಂದಿನ 10 ವರ್ಷಗಳ ದೂರದೃಷ್ಟಿಯನ್ನು ಹೊಂದಿರುವಂತಹ ಅಭಿವೃದ್ದಿ ಪೂರಕ ಬಜೆಟ್ ಆಗಿದೆ. ಗ್ಯಾರೆಂಟಿಗಳಿಗೆ ಅನುದಾನ ನೀಡಿದ ಮೇಲೂ ಆರ್ಥಿಕ ಸುಸ್ಥಿತಿಯನ್ನ ನಿಭಾಯಿಸಿ ಗ್ಯಾರೆಂಟಿಗಳ ಜೊತೆ ಅಗತ್ಯ ಅಭಿವೃದ್ದಿಗೆ ಯಾವುದೇ ಕೊರತೆ ಮಾಡದೇ ಇರುವಂತಹ ಪ್ರಗತಿಶೀಲ ಬಜೆಟನ್ನ ನಮ್ಮ ಮುಖ್ಯಮಂತ್ರಿಗಳೂ ಮಂಡಿಸಿದ್ದಾರೆ. ಈ ಮೂಲಕ ಇಡೀ ದೇಶಕ್ಕೇ ಕರ್ನಾಟಕ ಮಾದರಿ ಆಡಳಿತನ್ನ ಕೊಡುಗೆಯಾಗಿ ನೀಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಮೇಲ್ವಿಚಾರಕಿಯರ ಬಹುದಿನಗಳ ಬೇಡಿಕೆಯಾಗಿದ್ದ ಸ್ಮಾರ್ಟ್ ಫೋನ್ಗಾಗಿ 90 ಕೋಟಿ ರೂಪಾಯಿ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಪೂರ್ಣ ಅನುದಾನವನ್ನು ಮೀಸಲಿಟ್ಟಿರುವ ಮುಖ್ಯಮಂತ್ರಿಗಳು, ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯ ಸರ್ಕಾರ ಪ್ರಪ್ರಥಮ ಬಾರಿಗೆ ಸಮುದ್ರ ಆಂಬುಲೆನ್ಸ್ ಸೇವೆಯನ್ನು ಘೋಷಿಸಿದ್ದು ಇದಕ್ಕೆ 7 ಕೋಟಿ ರೂ. ಮೀಸಲು ಇಡಲಾಗಿದ್ದು ಕರಾವಳಿಯ ಮೀನುಗಾರರ ಸಮುದಾಯಕ್ಕೆ ಇದು ಉಪಯೋಗವಾಗಲಿದೆ.

ಇದು ಸಿದ್ದರಾಮಯ್ಯನವರ ದಾಖಲೆಯ ಬಜೆಟ್ ಆಗಿದ್ದು, ಭಾರತದ ಶಾಸಕಾಂಗ ಇತಿಹಾಸದಲ್ಲಿ 15 ಬಾರಿ ಬಜೆಟ್ ಮಂಡಿಸಿರುವವರು ತೀರಾ ಕಡಿಮೆ ಇದ್ದಾರೆ. ಮುಖ್ಯಮಂತ್ರಿಗಳು ತಮ್ಮ ಬಜೆಟ್ಟಿನಲ್ಲಿ ಶಕ್ತಿಶಾಲಿ ಕರ್ನಾಟಕ ನಿರ್ಮಾಣದ ತಮ್ಮ ದೂರದೃಷ್ಟಿಯನ್ನು ರಾಜ್ಯದ ಜನತೆಯ ಮುಂದಿಟ್ಟಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.


Spread the love