ಸಹಕಾರ, ಸಕ್ಕರೆ ಸಚಿವ ಎಚ್ ಎಸ್ ಮಹದೇವ ಪ್ರಸಾದ್ ಹೃದಯಘಾತದಿಂದ ನಿಧನ

Spread the love

ಸಹಕಾರ, ಸಕ್ಕರೆ ಸಚಿವ ಎಚ್ ಎಸ್ ಮಹದೇವ ಪ್ರಸಾದ್ ಹೃದಯಘಾತದಿಂದ ನಿಧನ

ಚಿಕ್ಕಮಗಳೂರು: ಸಹಕಾರ, ಸಕ್ಕರೆ ಸಚಿವ ಎಚ್ ಎಸ್ ಮಹದೇವ ಪ್ರಸಾದ್ (58) ಮಂಗಳವಾರ ಬೆಳಿಗ್ಗೆ ಹೃದಯಘಾತದಿಂದ ನಿಧನರಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಸಹಕಾರಿ ಸಂಘಟನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದ ಅವರು ಖಾಸಗಿ ರೆಸಾರ್ಟ್ ನಲ್ಲಿ ತಂಗಿದ್ದರು.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿಯ ಜನಿಸಿದ ಮಹದೇವ ಪ್ರಸಾದ್ 5 ಬಾರಿ ಗುಂಡ್ಲುಪೇಟೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

1994 ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಆಯ್ಕೆಯಾಗಿದ್ದ ಪ್ರಸಾದ್ ಸೋಲಿಲ್ಲದ ಸರದಾರರಾಗಿದ್ದರು. ಮೂರುಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದ ಪ್ರಸಾದ್ ಕಾಂಗ್ರೆಸಿಗೆ ಸೇರುವ ಮೊದಲು ಜನತಾದಳದಲ್ಲಿದ್ದರು.

ಮೃತರ ಅಂತ್ಯಕ್ರಿಯೆ ಹುಟ್ಟೂರು ಹಾಲಹಳ್ಳಿಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸಚಿವ ಮಹದೇವ ಪ್ರಸಾದ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಜನಪ್ರಿಯ ನಾಯಕ ಎಚ್ ಎಸ್ ಮಹದೇವ ಪ್ರಸಾದ್ ಅಕಾಲಿಕ ನಿಧನ ಆಘಾತ ತಂದಿದ್ದು, ಅವರು ತುಂಬಾ ಸೌಮ್ಯ ಸ್ವಭಾವದ ಕ್ರೀಯಾಶಿಲ ವ್ಯಕ್ತಿಯಾಗಿದ್ದರು ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿ ರಾಜ್ಯಧ್ಯಕ್ಷ ಬಿ ಎಸ್ ಯಡಿಯೂರಪ್ಪ ಶೋಕ ವ್ಯಕ್ತಪಡಿಸಿದ್ದಾರೆ.


Spread the love