Spread the love
ಸಹಸ್ರಾರು ಕಾರ್ಯಕರ್ತರೊಂದಿಗೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ನಾಮಪತ್ರ ಸಲ್ಲಿಕೆ
ಉಡುಪಿ: ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಅವರು ಸಹಸ್ರಾರು ಕಾರ್ಯಕರ್ತರ ಉಪಸ್ಥಿತಿಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು.
ಉಡುಪಿ ಜಿಲ್ಲಾ ಕಚೇರಿಯಲ್ಲಿ ಸಾರ್ವಜನಿಕ ಸಭೆ ನಡೆಸಿ ಬಳಿಕ ಕಡಿಯಾಳಿ, ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಬನ್ನಂಜೆ ಮಾರ್ಗವಾಗಿ ತಾಲೂಕು ಕಚೇರಿಯ ತನಕ ಬೃಹತ್ ಪಾದಯಾತ್ರೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದರು.
ಪಾದಯಾತ್ರೆಯಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಉಡುಪಿ, ಮಲ್ಪೆ, ಬ್ರಹ್ಮಾವರ, ಭಾಗಗಳಿಂದ ಭಾಗಿಯಾಗಿದ್ದರು.
ಸಚಿವ ಸುನಿಲ್ ಕುಮಾರ್, ಪ್ರಮೋದ್ ಮಧ್ವರಾಜ್, ಶಾಸಕ ರಘುಪತಿ ಭಟ್ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮತ್ತು ಇತರರು ಭಾಗಿಯಾಗಿದ್ದರು.
ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಗ್ರಾಮಾಂತರ ಅಧ್ಯಕ್ಷರಾದ ವೀಣಾ ನಾಯ್ಕ್, ಉಡುಪಿ ನಗರಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮನೋಹರ ಕಲ್ಮಾಡಿ ಉಪಸ್ಥಿತರಿದ್ದರು.
Spread the love