ಸಾಕು ನಾಯಿ ಸಾವು, ದುಃಖ ಹಂಚಿಕೊಂಡ ಗೃಹ ಸಚಿವ ಬಸವರಾಜ್ ಬೊಮ್ಮಾಯಿ

Spread the love

ಸಾಕು ನಾಯಿ ಸಾವು, ದುಃಖ ಹಂಚಿಕೊಂಡ ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಸಾಕು ಪ್ರಾಣಿಗಳೆಂದರೆ ಎಲ್ಲರಿಗೂ ಅಚ್ಚುಮೆಚ್ಚು. ಅದರಲ್ಲೂ ನಾಯಿ- ಬೆಕ್ಕುಗಳನ್ನು ಸಾಕುವವರಿಗೆ ಆ ಪ್ರಾಣಿಗಳೇ ಸರ್ವಸ್ವವೂ ಆಗಿರುತ್ತವೆ. ಮಾಲೀಕ ಮತ್ತು ಸಾಕು ಪ್ರಾಣಿಯ ನಡುವೆ ಅವಿನಾಭಾವ ಸಂಬಂಧ ಬೆಳೆದಿರುತ್ತದೆ.

ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಮುದ್ದಿನ ನಾಯಿ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡುವ ಮೂಲಕ ದುಃಖವನ್ನು ಹಂಚಿಕೊಂಡಿದ್ದಾರೆ. ಇಂದು ನಮ್ಮ ಮನೆಯ ಮುದ್ದಿನ ನಾಯಿ ‘ಸನ್ನಿ’ ವಯೋಸಹಜದಿಂದ ಸಾವನ್ನಪ್ಪಿದ್ದು ತೀವ್ರ ದುಃಖ ತಂದಿದ್ದು ಕುಟುಂಬದ ಓರ್ವ ಸದಸ್ಯನನ್ನು ಕಳೆದುಕೊಂಡಂತಾಗಿದೆ. ಮನೆಯ ಹಾಗೂ ಮನೆಗೆ ಬರುವ ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುತ್ತಿತ್ತು ಎಂದು ಟ್ವೀಟ್ ಮಾಡಿದ್ದಾರೆ.


Spread the love