ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಬಂಧನ

Spread the love

ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಬಂಧನ

ಮಂಗಳೂರು: ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿ ಅವರನ್ನು ಅಕ್ಟೋಬರ್ 7 ರಂದು ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ

ಸುನೀಲ್ ಬಜಿಲಕೇರಿ ಅವರ ವಿರುದ್ಧ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಮೇರೆಗೆ ಅವರನ್ನು ಬಂಧಿಸಲಾಗಿದೆ.

ಸುನೀಲ್ ಬಾಜಿಲಕೇರಿ ಅವರಿಗೆ ನೋಟಿಸ್ ನೀಡಲು ಅವರ ನಿವಾಸಕ್ಕೆ ತೆರಳಿದ್ದ ಪೊಲೀಸರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದರು. ಈ ಸಂಬಂಧ ಉರ್ವ ಪೊಲೀಸರು ಸುನೀಲ್ ಬಜಿಲಕೇರಿ ಅವರನ್ನು ವಶಕ್ಕೆ ಪಡೆದಿದ್ದು, ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಂತರ ಹೆಚ್ಚಿನ ತನಿಖೆಗಾಗಿ ಬಜ್ಪೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.


Spread the love