ಸಾಮಾಜಿಕ ಜಾಲತಾಣಗಳಲ್ಲಿ ಧರ್ಮ ನಿಂದನೆ – ವ್ಯಕ್ತಿಯ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಧರ್ಮ ನಿಂದನೆ – ವ್ಯಕ್ತಿಯ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಗಳ ಕುರಿತು ಅವಹೇಳನಕಾರಿ ಸುದ್ದಿಗಳನ್ನು ಬಿತ್ತರಿಸಿದ ಆರೋಪದ ಮೇಲೆ ವ್ಯಕ್ತಿಯೋರ್ವರ ಮೇಲೆ ಉಳ್ಳಾಲ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಆರೋಪಿ ಝಾಕೀರ್ ಉಳ್ಳಾಲ ಎನ್ನುವ ವ್ಯಕ್ತಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಮೂಲಕ ಧರ್ಮನಿಂದನೆಯ ಸುದ್ದಿಗಳನ್ನು ಫಾರ್ವರ್ಡ್ ಮಾಡಿದ ಕುರಿತು ದೂರು ಬಂದಿದ್ದು ಅದರಂತೆ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದ್ದು, ಸೂಕ್ತ ದಾಖಲೆಗಳ ಆಧಾರದಲ್ಲಿ ಆತನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಯಾರೂ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಧರ್ಮ ನಿಂದನೆಯ ಸುದ್ದಿಗಳನ್ನು ಪ್ರಸಾರ ಮಾಡಿ ಸಾಮಾಜಿಕ ಸ್ವಾಸ್ಥ್ಯ ಕೆಡಿಸಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಕಮೀಷನರ್ ಡಾ | ಹರ್ಷ ಎಚ್ಚರಿಕೆ ನೀಡಿದ್ದಾರೆ.