ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಫೋಟೊ ರವಾನೆ; ಆರೋಪಿ ಸೆರೆ

Spread the love

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಫೋಟೊ ರವಾನೆ; ಆರೋಪಿ ಸೆರೆ

ಬಂಟ್ವಾಳ: ಯುವತಿಯೋರ್ವಳ ಅಶ್ಲೀಲ ಭಾವಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಮಾನಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಮಂಜೇಶ್ವರ ನಿವಾಸಿ ಜಿತೇಶ್ ಸಪಲ್ಯ ಬಂಧಿತ ಆರೋಪಿ. ಆರೋಪಿಯು ಯುವತಿಯೋರ್ವಳೊಂದಿಗೆ ಗೆಳೆತನ ಮಾಡಿ ಬಳಿಕ ಮದುವೆಗೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ ದ್ವೇಷದಿಂದ ಆಕೆಯ ಅಶ್ಲೀಲ ಚಿತ್ರಗಳನ್ನು ಮೊಬೆಲ್‍ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಮಾನಹಾನಿ ಮಾಡಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಸೆ. 18ರಂದು ದೂರು ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡು ಆರೋಪಿಯ ಪತ್ತೆಗಾಗಿ ಮಾಹಿತಿ ಸಂಗ್ರಹಿಸಿ ಪುಂಜಾಲಕಟ್ಟೆ ಠಾಣಾ ಎಸ್ಸೈ ಹಾಗೂ ಸಿಬಂದಿ ಸೆ. 19ರಂದು ಮಂಜೇಶ್ವರ ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಳಿಕ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love