ಸಾಮಾಜಿಕ ಜಾಲತಾಣದಲ್ಲಿ ಕೋಮುಸೌಹಾರ್ಧತೆಗೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ: ಪ್ರಕರಣ ದಾಖಲು
ಪ್ರಕರಣದ ಪಿರ್ಯಾದಿದಾರರಾದ ಬೆಳ್ತಂಗಡಿ ಉಜಿರೆ ನಿವಾಸಿ ಕಲಂದರ್ ಪುತ್ತುಮೋನು (42) ಎಂಬವರು ನೀಡಿದ ದೂರಿನಂತೆ, ಸದ್ರಿಯವರು ತನ್ನ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸುತ್ತಿದ್ದಾಗ, ಸಾಮಾಜಿಕ ಜಾಲತಾಣವಾದ ಪೇಸ್ ಬುಕ್ ನ ಕುಲುಮೆ ಎಂಬ ಗ್ರೂಪ್ ನಲ್ಲಿ AyshuAysha ಎಂಬ ಫೇಸ್ಬುಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯು, ವಿಭಿನ್ನ ಕೋಮುಗಳ ನಡುವೆ ವೈಮನಸ್ಸು ಉಂಟಾಗುವಂತಹ ಸುಳ್ಳು ವದಂತಿಗಳಿರುವ ವರದಿಯನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಬಗ್ಗೆ ಪಿರ್ಯಾದಿರವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆಯಲ್ಲಿ ಅ.ಕ್ರ: 70/2025, ಕಲಂ:353 (1)(b), 353(2) BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.