ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟರ್ : ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಎಸ್ಪಿಗೆ ಮನವಿ ಸಲ್ಲಿಕೆ

Spread the love

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟರ್ : ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಎಸ್ಪಿಗೆ ಮನವಿ ಸಲ್ಲಿಕೆ

ಉಡುಪಿ: ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ ಪ್ರಿಯಾಂಕ ಖರ್ಗೆ ಅವರ ಹೇಳಿಕೆಯನ್ನು ಗುರಿಯಾಗಿರಿಸಿಕೊಂಡು ಕಿಡಿಗೇಡಿಗಳು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಎಂಬ ಹೆಸರನ್ನು ಬಳಸಿ ಖರ್ಗೆಯವರ ವರ್ಚಸ್ಸನ್ನು ಕುಗ್ಗಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟರನ್ನು ಹರಿಯ ಬಿಟ್ಟಿರುವ ಕುರಿತು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈ ಹೇಳಿಕೆಗಳಿಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೂ ಯಾವುದೇ ಸಂಬಂಧವಿಲ್ಲ ˌ ಈ ಹಿನ್ನೆಲೆಯಲ್ಲಿ ಸಚಿವರ ವರ್ಚಸ್ಸಿಗೆ ಧಕ್ಕೆ ತರಲು ಸುಳ್ಳು ಹೇಳಿಕೆ ನೀಡಿ ಜಾಲತಾಣದಲ್ಲಿ ಹರಿಯಬಿಟ್ಟ ಕಿಡಿಗೇಡಿಗಳನ್ನು ಶೀಘ್ರ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ರೋಷನ್ ಶೆಟ್ಟಿ, ಪಕ್ಷದ ಮುಖಂಡರಾದ ಹರೀಶ್ ಶೆಟ್ಟಿ ಪಂಗಾಳˌ ಭಾಸ್ಕರ್ ರಾವ್ ಕಿದಿಯೂರು, ಬಿ.ಕುಶಲ ಶೆಟ್ಟಿˌ ಪ್ರಖ್ಯಾತ್ ಶೆಟ್ಟಿˌಯತೀಶ್ ಕರ್ಕೇರˌ ನಾಗೇಶ್ ಕುಮಾರ್ ಉದ್ಯಾವರ ಜಯಕುಮಾರ್ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು


Spread the love