ಸಾಮಾಜಿಕ ಹೋರಾಟಗಾರ ಸುನೀಲ್ ಕಬ್ರಾಲ್ ಶಿರ್ವ ನಿಧನ

Spread the love

ಸಾಮಾಜಿಕ ಹೋರಾಟಗಾರ ಸುನೀಲ್ ಕಬ್ರಾಲ್ ಶಿರ್ವ ನಿಧನ

ಉಡುಪಿ: ಸಾಮಾಜಿಕ ಹೋರಾಟಗಳಲ್ಲಿ ಮಂಚೂಣಿ ನಾಯಕತ್ವ ವಹಿಸಿದ್ದ ಸುನೀಲ್ ಕಬ್ರಾಲ್ ಶಿರ್ವ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.

ಕಳೆದ ಹಲವು ದಿನಗಳಿಂದ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಶುಕ್ರವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದ ಸುನೀಲ್ ಇತ್ತೀಚೆಗಷ್ಟೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಸಾಮಾಜಿ ಸಂಘಟನೆಯಾದ ಇಂಡಿಯನ್ ಕ್ರಿಶ್ಚಿಯನ್ ಯೂನಿಯನ್ ನ ಸ್ಥಾಪಕ ಅಧ್ಯಕ್ಷರಾಗಿದ್ದ ಅವರು ರೋಟರಿ ಕ್ಲಬ್ ಶಿರ್ವ ಇದರ ಅಧ್ಯಕ್ಷರಾಗಿ, ಶಿರ್ವ ಚರ್ಚಿನ ಪಾಲನಾ ಮಂಡಳಿಯ ಸದಸ್ಯರಾಗಿ, ಶಿರ್ವ ಗ್ರಾಮ ಪಂಚಾಯತ್ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದರು. ವಿವಿಧ ಸಾಮಾಜಿಕ ಹೋರಾಟಗಳಲ್ಲಿ ಕೂಡ ತಮ್ಮನ್ನು ತೊಡಗಿಸಿಕೊಂಡಿದ್ದರು.

ಮೃತ ಸುನೀಲ್ ಪತ್ನಿ ಬೊನಿಟಾ ಹಾಗೂ ಅಪಾರ ಬಂಧು-ಬಳಗದವರನ್ನು ಆಗಲಿದ್ದಾರೆ.


Spread the love