ಸಾಮೂಹಿಕ ಅತ್ಯಾಚಾರ ಪ್ರಕರಣ; ಆರೋಪಿಗಳಿಬ್ಬರ ಬಂಧನ

Spread the love

ಸಾಮೂಹಿಕ ಅತ್ಯಾಚಾರ ಪ್ರಕರಣ; ಆರೋಪಿಗಳಿಬ್ಬರ ಬಂಧನ

ಉಪ್ಪಿನಂಗಡಿ: ಯುವತಿಯೋರ್ವಳನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆಯನ್ನು ನಡೆಸಿದ ಉಪ್ಪಿನಂಗಡಿ ಪೋಲಿಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಕೊಕ್ಕಡ ಗ್ರಾಮದ ಅಲ್ಲಿಂಗೇರಿ ನಿವಾಸಿ ಧನಂಜಯ (26) ಹಾಗೂ ಕೊಲ್ಲಜೆಪಳಿಕೆ ನಿವಾಸಿ ಕುಶಾಲಪ್ಪ (24) ಎಂದು ಗುರುತಿಸಲಾಗಿದೆ.

ಶನಿವಾರ ಬೆಳಿಗ್ಗೆ ಕೊಕ್ಕಡ ಪೇಟೆಯಲ್ಲಿ ಇವರನ್ನು ವಶಕ್ಕೆ ಪಡೆದ ಪೋಲಿಸರು ಹೆಚ್ಚಿನ ವಿಚಾರಣೆ ನಡೆಸಿದ್ದು, ಆರೋಪಿಗಳು ಇವರೆಂದು ಸಾಬಿತಾದ ಬಳಿಕ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.


Spread the love