ಸಾರ್ವಜನಿಕವಾಗಿ ರಸ್ತೆಯಲ್ಲಿ ಹೊಡೆದಾಡಿಕೊಂಡ ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು

Spread the love

ಸಾರ್ವಜನಿಕವಾಗಿ ರಸ್ತೆಯಲ್ಲಿ ಹೊಡೆದಾಡಿಕೊಂಡ ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಉಡುಪಿಯ ಬಂಟಕಲ್ಲು ಮಧ್ವ ವಾದಿರಾಜ ಇಂಜಿನಿಯರ್ ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕವಾಗಿ ಹೊಡೆದಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.

ಪೊಲೀಸ್ ಮಾಹಿತಿಗಳ ಪ್ರಕಾರ ವಿದ್ಯಾರ್ಥಿಗಳ ತಂಡವೊಂದು ಕ್ಷುಲ್ಲಕ ಕಾರಣಕ್ಕೆ ರಸ್ತೆಗಿಳಿದು ಪರಸ್ಪರ ಸಾರ್ವಜನಿಕರ ಎದುರಲ್ಲೇ ಹೊಡೆದಾಡಿಕೊಂಡಿದ್ದರು. ಪದೇ ಪದೇ ಕಾಲೇಜು ಪರಿಸರದಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಳ್ಳುತ್ತಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಕೂಡ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದು ಕೆಲವೊಂದು ಹೊರಗಿನ ವ್ಯಕ್ತಿಗಳು ಸೇರಿಕೊಂಡು ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಕೂಡಲೇ ಸ್ಥಳೀಯರು ಶಿರ್ವ ಠಾಣಾ ಪೊಲೀಸರು ಮಾಹಿತಿ ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಶಿರ್ವ ಠಾಣಾ ಪೊಲೀಸರು ಕೆಲವು ವಿದ್ಯಾರ್ಥಿಗಳನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಘಟನೆಯಲ್ಲಿ ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಇದೇ ವೇಳೆ ಪರಸ್ಪರ ಹೊಡೆದಾಡಿಕೊಂಡ ಕೆಲವೊಂದು ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ ಎನ್ನಲಾಗಿದೆ.


Spread the love