ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕನ ಬಂಧನ

468
Spread the love

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕನ ಬಂಧನ

ಮಂಗಳೂರು: ನಗರದ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆ ಮತ್ತು ಸಿಸಿಬಿ ಘಟಕದ ಜಂಟಿ ಕಾರ್ಯಾಚರಣೆಯ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಥಮ ಪ್ರಕರಣದಲ್ಲಿ ಮಂಗಳೂರು ನಗರದ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣಾ ನಿರೀಕ್ಷಕರು ಮತ್ತು ಸಿಬ್ಬಂದಿಗಳು  ದಿನಾಂಕ 11-02-2019 ರಂದು ಮಂಗಳೂರು ನಗರದ ಪಂಜಿಮೊಗರು ವಿವೇಕನಗರ ಸಾರ್ವಜನಿಕ ರಸ್ತೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯಾದ ಸನತ್ ರಾವ್ (22) ಪಂಜಿಮೊಗರು ಮಂಗಳೂರು ಎಂಬಾತನನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಆರೋಪಿತನಿಂದ ಸುಮಾರು 104 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ವನ್ನು ವಶಪಡಿಸಿ ದ್ದು ವಶಪಡಿಸಿದ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ ರೂಪಾಯಿ 35250/- ಆಗಿರುತ್ತದೆ. ಈ ಬಗ್ಗೆ ಇಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹಾಗೂ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.

ಎರಡನೇ ಪ್ರಕರಣದಲ್ಲಿ ಫೆಬ್ರವರಿ 12 ರಂದು ಮಂಗಳೂರು ನಗರದ ವೆಲೆನ್ಸಿಯಾ ಸ್ಟೇಟ್ ಬ್ಯಾಂಕ್ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯಾದ ಪ್ರೀತಂ .ಜೆ (31) ವೆಲೆನ್ಸಿಯಾ ಉಜ್ಜೋಡಿ ಮಂಗಳೂರು ಎಂಬಾತನನ್ನು ವಶಕ್ಕೆ ಪಡೆದು ಕ್ರಮ ಕೈಗೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಆರೋಪಿತನಿಂದ ಸುಮಾರು 260 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಮತ್ತು ಮೊಬೈಲ್ ಪೋನನ್ನು ವಶಪಡಿಸಿ ದ್ದು ವಶಪಡಿಸಿದ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ ರೂಪಾಯಿ 90220/- ಆಗಿರುತ್ತದೆ.

ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಎಕಾನಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಕೃಷ್ಣ ಕೆ.ಕೆ., ಮತ್ತು ಸಿಬ್ಬಂದಿಗಳು ಹಾಗೂ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶಾಂತರಾಮ ಮತ್ತು ಉಪ- ನಿರೀಕ್ಷಕರಾದ ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.


Spread the love