ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇವನೆ ಪ್ರಶ್ನಿಸಿದ್ದಕ್ಕೆ ವ್ಯಕ್ತಿಗೆ ಇರಿತ

Spread the love

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇವನೆ ಪ್ರಶ್ನಿಸಿದ್ದಕ್ಕೆ ವ್ಯಕ್ತಿಗೆ ಇರಿತ

ಉಡುಪಿ: ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದುವುದನ್ನು ಪ್ರಶ್ನಿಸಿದ್ದಕ್ಕಾಗಿ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಹಲ್ಲೆಗೊಳಗಾದ ತೆಂಕನಿಡಿಯೂರು ಗ್ರಾಮದ ಈಶ್ವರನಗರದ ನಿವಾಸಿ ರತ್ನಾಕರ ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರತ್ನಾಕರ ಅವರು ಮಣಿಪಾಲ ಕಡೆಗೆ ಹೋಗುವ ಬಸ್ ನಿಲ್ದಾಣದಲ್ಲಿ ನಿಂತುಕೊಂಡಿದ್ದ ವೇಳೆ ಮೂಡುಬೆಳ್ಳೆ ಕಡೆಗೆ ಹೋಗುವ ಬಸ್ಸಿನ ಕ್ಲೀನರ್ ಕೈಯಲ್ಲಿ ಸಿಗರೇಟ್ ಹಿಡಿದುಕೊಂಡು ಸೇದುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ, ಕೋಪಗೊಂಡು ರತ್ನಾಕರ್ ಅವರನ್ನು ದೂಡಿ ಹಾಕಿ ಚಾಕುವಿನಿಂದ ಹೊಟ್ಟೆ ಮತ್ತು ಸೊಂಟಕ್ಕೆ ತಿವಿದು ಗಂಭೀರವಾಗಿ ಗಾಯಗೋಳಿಸಿದ್ದಾರೆ,
ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love