ಸಾವರ್ಕರ್ ಬ್ಯಾನರ್ ತೆರವುಗೊಳಿಸುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರಿಂದ ಪೌರಯುಕ್ತರಿಗೆ ಮನವಿ

Spread the love

ಸಾವರ್ಕರ್ ಬ್ಯಾನರ್ ತೆರವುಗೊಳಿಸುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರಿಂದ ಪೌರಯುಕ್ತರಿಗೆ ಮನವಿ

ಉಡುಪಿ: ನಗರದ ಬ್ರಹ್ಮಗಿರಿ ಸರ್ಕಲ್ ಬಳಿ   ಅಳವಡಿಸಿರುವ ಸಾವರ್ಕರ್ ಭಾವಚಿತ್ರವಿರುವ ಬ್ಯಾನರ್ ಅನ್ನು ಕೂಡಲೇ ತೆರವುಗೊಳಿಸಬೇಕು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ನಗರಸಭೆಯ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

ಸಮಾಜದ ಶಾಂತಿ ಕದಡಲು ಈ ಬ್ಯಾನರ್ ಪರೋಕ್ಷವಾಗಿ ಕಾರಣವಾಗುತ್ತಿದ್ದು ಕೂಡಲೇ ಅದನ್ನು ತೆರವುಗೊಳಿಸುವಂತೆ ಆಗ್ರಹಿಸದರು.

ಈ ಮೊದಲು ನಗರ ಠಾಣೆಯ ಪೊಲೀಸ್ ಅಧಿಕಾರಿ ಪ್ರಮೋದ್ ಅವರನ್ನು ಭೇಟಿ ಮಾಡಿ ಬ್ಯಾನರ್ ತೆರವುಗೊಳಿಸುವಂತೆ ಮನವಿ ಮಾಡಿದರು.

ಈ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ಹಮ್ಮದ್ ಉಡುಪಿ, ಕಾಂಗ್ರೆಸ್ ನಾಯಕರಾದ ಯತೀಶ್ ಕರ್ಕೇರಾ, ಶರತ್ ಶೆಟ್ಟಿ ಹಾಗೂ ಇತರರು ಉಪಸ್ಥೀತರಿದ್ದರು.


Spread the love