ಸಿಎಂ ಪಟ್ಟಕ್ಕಾಗಿ ಫೈಟ್: ಡಿಕೆಶಿ, ಸಿದ್ದರಾಮಯ್ಯ ಜತೆ ಒನ್ ಟು ಒನ್ ಚರ್ಚಿಸಿದ ಖರ್ಗೆ

Spread the love

ಸಿಎಂ ಪಟ್ಟಕ್ಕಾಗಿ ಫೈಟ್: ಡಿಕೆಶಿ, ಸಿದ್ದರಾಮಯ್ಯ ಜತೆ ಒನ್ ಟು ಒನ್ ಚರ್ಚಿಸಿದ ಖರ್ಗೆ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ ನಂತರ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಒನ್ ಟು ಒನ್ ಸಭೆ ನಡೆಸಿ, ಇಬ್ಬರ ವಾದವನ್ನು ಆಲಿಸುತ್ತಿದ್ದಾರೆ.

ಡಿಕೆ ಶಿವಕುಮಾರ್ ಅವರೊಂದಿಗಿನ ಸಭೆ ಮುಗಿದಿದ್ದು, ಇದೀಗ ಖರ್ಗೆ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುತ್ತಿದ್ದಾರೆ.

ಖರ್ಗೆ ಭೇಟಿ ವೇಳೆ ಡಿಕೆ ಶಿವಕುಮಾರ್ ಅವರು ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ಕೊಟ್ಟರೆ ಸಿಎಂ ಹುದ್ದೆ ಕೊಡಿ. ಇಲ್ಲದಿದ್ದರೆ ನನಗೆ ಯಾವುದೇ ಹುದ್ದೆ ಬೇಡ ಒಬ್ಬ ಶಾಸಕನಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.

ಖರ್ಗೆ ಅವರೊಂದಿಗೆ ಸಭೆ ಮುಗಿಸಿ ಹೊರಬಂದ ಡಿಕೆ ಶಿವಕುಮಾರ್ ಅವರು ಮಾಧ್ಯಮಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿದೆ ತೆರಳಿದ್ದಾರೆ.

ನಾನು ಮೂಲ ಕಾಂಗ್ರೆಸ್ಸಿಗ. ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದೇನೆ. ಸೋತು ಸುಣ್ಣವಾಗಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ಮಾತು ಕೊಟ್ಟಂತೆ ನಡೆದಿದ್ದೇನೆ. ಹೊರಗಿನಿಂದ ಬಂದವರು ಅಧಿಕಾರ ಅನುಭವಿಸಿದ್ದಾರೆ. ಮೂಲ ಕಾಂಗ್ರೆಸ್ಸಿಗನಾಗಿರುವ ನನಗೆ ಸಿಎಂ ಸ್ಥಾನ ನೀಡಲೇಬೇಕು ಎಂದು ಡಿಕೆ ಶಿವಕುಮಾರ್ ಹೈಕಮಾಂಡ್ ಮುಂದೆ ಪಟ್ಟು ಹಿಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ.

ಇನ್ನು ಡಿಕೆ ಶಿವಕುಮಾರ್ ಜೊತೆ ಚರ್ಚೆ ನಡೆಸಿದ ಬಳಿಕ ಖರ್ಗೆ ಅವರು ಸಿದ್ದರಾಮಯ್ಯ ಅವರೊಂದಿಗೆ ಪ್ರತ್ಯೇಕ ಚರ್ಚೆ ನಡೆಸುತ್ತಿದ್ದು, ಇಬ್ಬರು ನಾಯಕರ ವಾದವನ್ನು ಆಲಿಸಿದ ನಂತರ ಖರ್ಗೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.


Spread the love

Leave a Reply

Please enter your comment!
Please enter your name here