ಸಿಎಂ ಬೊಮ್ಮಾಯಿ ಅವರಿಗೆ ಬೆದರಿಕೆ – ಬರ್ಕೆ ಪೊಲೀಸರಿಂದ ಇನ್ನೊಬ್ಬನ ಬಂಧನ

Spread the love

ಸಿಎಂ ಬೊಮ್ಮಾಯಿ ಅವರಿಗೆ ಬೆದರಿಕೆ – ಬರ್ಕೆ ಪೊಲೀಸರಿಂದ ಇನ್ನೊಬ್ಬನ ಬಂಧನ

ಮಂಗಳೂರು: ಸೆಪ್ಟೆಂಬರ್ 18 ರಂದು ಹೋಟೆಲ್ ಪಾತುಮುಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸರು ಸೆಪ್ಟೆಂಬರ್ 19 ರಂದು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಪ್ರೇಮ್‌ ಪೊಳಲಿ ಎಂದು ಗುರುತಿಸಲಾಗಿದೆ

ಹಿಂದೂ ಮಹಾ ಸಭಾದ ರಾಜ್ಯಾಧ್ಯಕ್ಷ ಡಾ.ಲೋಹಿತ್ ಕುಮಾರ್ ಅವರು ಉಚ್ಛಾಟಿತ ಎಚ್‌ಎಂಎಸ್ ಸದಸ್ಯ ಧರ್ಮೇಂದ್ರ ಮತ್ತು ಇತರ 7 ಸದಸ್ಯರ ವಿರುದ್ಧ ವಿವಾದಾತ್ಮಕ ಹೇಳಿಕೆ ಮತ್ತು ಅಖಿಲ ಭಾರತ ಹಿಂದೂ ಮಹಾ ಸಭಾದ ಹೆಸರು ಮತ್ತು ಲೆಟರ್‌ಹೆಡ್ ಅನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಸೆಪ್ಟೆಂಬರ್ 18 ರಂದು ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು

ಈ ಹಿಂದೆ ಬರ್ಕೆ ಪೊಲೀಸರು ರಾಜೇಶ್ ಪವಿತ್ರನ್ ಮತ್ತು ಧರ್ಮೇಂದ್ರ ಅವರನ್ನು ಬಂಧಿಸಿದ್ದರು.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್‌ ಕಮೀಷನರ್‌ ಶಶಿಕುಮಾರ್‌, “ಹಿಂದೂ ಮಹಾ ಸಭಾದ ರಾಜ್ಯಾಧ್ಯಕ್ಷ ಡಾ. ಲೋಹಿತ್ ಕುಮಾರ್ ಅವರು ಮೈಸೂರಿನಲ್ಲಿ ದೇವಸ್ಥಾನವನ್ನು ಕೆಡವಿರುವುದನ್ನು ಉಲ್ಲೇಖಿಸಿ ಹಿಂದೂ ಮಹಾ ಸಭೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂದು ಹೇಳಿಕೊಳ್ಳುತ್ತಿರುವ ಧರ್ಮೇಂದ್ರ ವಿರುದ್ಧ ದೂರು ದಾಖಲಿಸಿದ್ದಾರೆ. ಅವರು “ಹಿಂದೂಗಳನ್ನು ರಕ್ಷಿಸುವ ಪ್ರಯತ್ನದಲ್ಲಿ ಮಹಾತ್ಮ ಗಾಂಧಿಯವರನ್ನು ಸಹ ಉಳಿಸಲಿಲ್ಲ” ಎಂದು ಅವರು ಬಿಜೆಪಿ ನಾಯಕರಿಗೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ. ಧರ್ಮೇಂದ್ರ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಗುರಿಯಾಗಿಸಿಕೊಂಡು ಬೆದರಿಕೆ ಹಾಕಿದ್ದರು. ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಆಧಾರದ ಮೇಲೆ, ನಾವು ಧರ್ಮೇಂದ್ರ, ರಾಜೇಶ್ ಪವಿತ್ರನ್ ಮತ್ತು ಪ್ರೇಮ್ ಪೊಳಲಿ ಸೇರಿದಂತೆ ಮೂವರನ್ನು ಬಂಧಿಸಿದ್ದೇವೆ ಎಂದು ಹೇಳಿದರು.


Spread the love